ಹಿಂದುಳಿದ ವರ್ಗಗಳ ಆರ್ಥಿಕಾಭಿವೃದ್ಧಿಗೆ ಸಾಲ
ಹಾಸನ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2014-15ರ ಸಾಲಿಗೆ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗೆ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು, ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಸೇರಿದಂತೆ ನಿಗಮದ ನಾನಾ ಯೋಜನೆಗಳಲ್ಲಿ ಅರ್ಹ ಹಿಂದುಳಿದ ವರ್ಗಗಳ ಜನರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಲು ಜೂನ್ 20 ಕಡೇ ದಿನ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜುಲೈ 19 ಕೊನೆ ದಿನ.
2013-14ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಸೌಲಭ್ಯ ದೊರೆಯದಿದ್ದಲ್ಲಿ ಪುನಃ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈಗಾಗಲೇ ಸಲ್ಲಿಸಿರುವ ಅರ್ಜಿಯನ್ನೇ ಪರಿಗಣಿಸಲಾಗುವುದು. ಒಂದು ಭಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.