ಪರಿಸರ ಜಾಗೃತಿ ವಿದ್ಯಾರ್ಥಿಗಳಿಂದಾಗಲಿ
ಸಕಲೇಶಪುರ: ಪರಿಸರ ಜಾಗೃತಿಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಪುರಸಭೆ ಪರಿಸರ ಎಂಜಿನಿಯರ್ ಲಕ್ಷ್ಮೀಶ್ ಹೇಳಿದ್ದಾರೆ.ಗುರುವಾರ ಪಟ್ಟಣದ ಆಕ್ಸಫರ್ಡ್ ಶಾಲೆಯಲ್ಲಿ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಿಡನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರು ಅಭ್ಯುದಯ ಹೊಂದುವ ನಿಟ್ಟಿನಲ್ಲಿ ವ್ಯಾಪಕವಾಗಿ ಹಾನಿ ಊಂಟುಮಾಡುತ್ತಿದ್ದು ಗಾಳಿ, ನೀರು ಹಾಗೂ ಪರಿಸರದ ಮೇಲೆ ಮಾನವರು ನಿತ್ಯ ದಾಳಿ ಮಾಡುತ್ತಿದ್ದಾರೆ. ಈ ವರ್ತನೆ ಹೀಗೆ ಮುಂದುವರಿದರೆ ಮುಂದಿನ ಜನಾಂಗ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು. ವಿದ್ಯಾರ್ಥಿಗಳು ಗಿಡನೆಟ್ಟು ಪೋಷಿಸುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದರ ಬಗ್ಗೆ ಜಾಗೃತಿ ಉಂಟು ಮಾಡುವ ಮೂಲಕ ಪ್ಲಾಸ್ಟಿಕ್ ವಾತಾವರಣದಲ್ಲಿ ಸೇರುವುದನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.