ಬೀದಿನಾಟಕ ತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ
ಹಾಸನ : ವಾರ್ತಾ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮದಡಿ ಬೀದಿನಾಟಕ ತಂಡಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೀದಿನಾಟಕ ತಂಡದಲ್ಲಿ ಕನಿಷ್ಠ ಎಂಟು ಸದಸ್ಯರಿದ್ದು ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಇರುವ ತಂಡಕ್ಕೆ ಆದ್ಯತೆ ನೀಡಲಾಗುವುದು. ಆಯ್ಕೆಯನ್ನು ಮೈಸೂರು ವಿಭಾಗಮಟ್ಟದಲ್ಲಿ ನಡೆಸಲಾಗುವುದು. ಆಯ್ಕೆಗಾಗಿ ತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
ಮೈಸೂರು ವಿಭಾಗ ವ್ಯಾಪ್ತಿಯ ಜಿಲ್ಲೆಗಳ ತಂಡಗಳು ತಮ್ಮ ಅರ್ಜಿಗಳನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು, ಹಿರಿಯ ಸಹಾಯಕ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ತಂಡದ ಹೆಸರು, ವಿಳಾಸ, ತಂಡದ ಮುಖ್ಯಸ್ಥರ ಹೆಸರು ವಿಳಾಸ, ತಂಡದ ಕಲಾವಿದರ ಹೆಸರು ವಿಳಾಸ, ನೋಂದಣಿ ಸಂಖ್ಯೆ ಮತ್ತಿತರ ವಿವರಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಜೂನ್ 17 ಕಡೇ ದಿನ. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲಾ ವಾರ್ತಾ ಕಚೇರಿಗಳನ್ನು ಸಂಪರ್ಕಿಸಬಹುದು.