ಮುಂದಿನ ಪೀಳಿಗೆಗೂ ಪರಿಸರ ಉಳಿಸೋಣ
ಅರಕಲಗೂಡು: ಮಾನವ ತನ್ನ ಪ್ರತಿನಿತ್ಯದ ಬದುಕಿಗೆ ಪರಿಸರವನ್ನೇ ಅವಲಂಭಿಸಿದ್ದರೂ ಇಂದಿನ ದಿನಗಳಲ್ಲಿ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಿರ್ಲಕ್ಷಿಸುತ್ತಾ ಸಾಗಿದ್ದಾನೆ. ಇದು ಆತಂಕಕಾರಿ ವಿಷಯವಾಗಿದ್ದು, ನಮ್ಮ ಪರಿಸರವನ್ನು ಸಂರಕ್ಷಿಸುವ ಮೂಲಕ ನಮ್ಮ ಬದುಕು ಹಸನು ಮಾಡಿಕೊಳ್ಳುವ ಜೊತೆಗೆ ಮುಂದಿನ ಪೀಳಿಗೆಗೂ ಒಳಿತನ್ನು ಮಾಡುವುದು ಅವಶ್ಯವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ರಾಜೇಗೌಡ ತಿಳಿಸಿದ್ದಾರೆ.
ತಾಲೂಕಿನ ಬೈಚನಹಳ್ಳಿ ಗ್ರಾಮದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರವ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಯೋಜನೆಯ ಸದಸ್ಯರು ಮತ್ತು ಕಾಲೇಜು ಮಕ್ಕಳಿಂದ ಪರಿಸರ ಜಾಥಾ ನಡೆಸಲಾಯಿತು. ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.