ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾರ್ಮಿಕರ ಒತ್ತಡಕ್ಕೆ ಮಣಿದ ಮಿನರ್ವ ಮಿಲ್ ಆಡಳಿತ ಮಂಡಳಿ

Rashmi Kasaragodu
Updated On : 8 Jun 2014, 2:07 am

ಹಾಸನ: ಕಳೆದ ಹದಿನೈದು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಮಿನರ್ವ ಮಿಲ್ ಕಾರ್ಮಿಕರ ಒತ್ತಡಕ್ಕೆ ಮಣಿದ ಕಾರ್ಖಾನೆಯ ಆಡಳಿತ ಮಂಡಳಿ, ಜೂ.16 ರಂದು ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿನ ನ್ಯೂ ಮಿನರ್ವ ಮಿಲ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಾರ್ಖಾನೆ ಎದುರು ಕಾರ್ಮಿಕರು ಕೆಲಸ ಬಹಿಷ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರೂ ಈವರೆಗೂ ಕಾರ್ಖಾನೆ ಆಡಳಿತ ಮಂಡಳಿ ಸ್ಪಂದಿಸಿರಲಿಲ್ಲ. ಕಾರ್ಮಿಕರು ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿ ಆಡಳಿತಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದರಾದರೂ ಸಫಲರಾಗಿರಲಿಲ್ಲ.  ಜೂ.16 ರಂದು ಮಿನರ್ವ ಮಿಲ್‌ನ ಮುಖ್ಯಸ್ಥರು ಕಾರ್ಮಿಕರ ಬೇಡಿಕೆ ಬಗ್ಗೆ ಚರ್ಚಿಸಿ ಬಗೆಹರಿಸುವುದಾಗಿ ಬರವಸೆ ನೀಡಿದ್ದಾರೆ. ಆದರೂ ಕಾರ್ಮಿಕರ ಮುಷ್ಕರವನ್ನು ಕೊನೆಗಳಿಸದೆ ಬೇಡಿಕೆ ಈಡೇರುವವರೆಗೂ ಮುಂದುವರೆಸುವುದಾಗಿ ಪಟ್ಟು ಹಿಡಿದಿದ್ದಾರೆ.
ಈ ಸಂದರ್ಭದಲ್ಲಿ ಮುಷ್ಕರದಲ್ಲಿ ಪ್ರವೀಣ್, ಮಧು, ಡಿ.ಎಲ್.ರಂಗಸ್ವಾಮಿ, ಸುನೀಲ್, ದೇವರಾಜ್ ಹಾಗೂ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement