ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಹಾಸನ: 2014-15ನೇ ಸಾಲಿಗೆ ಸಕಲೇಶಪುರ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಈ ಕೆಳಕಂಡ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಸಕಲೇಶಪುರ ತಾಲೂಕಿನ ನಾನಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪ.ಜಾತಿ ವರ್ಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿ ನಿಲಯಗಳ ವಿವರ: ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಸಕಲೇಶಪುರ ಟೌನ್. ಮೇಲ್ಕಂಡ ವಿದ್ಯಾರ್ಥಿ ನಿಲಯಗಳಲ್ಲಿ ಊಟ, ವಸತಿ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅರ್ಜಿ ಫಾರಂಗಳು ಆಯಾ ವಿದ್ಯಾರ್ಥಿನಿಲಯಗಳಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ದೊರೆಯುತ್ತವೆ. ಅರ್ಜಿಗಳನ್ನು ಜೂನ್ 5 ರಿಂದ ನೀಡಲಾಗುತ್ತಿದೆ. ಜೂನ್ 15ರೊಳಗೆ ಆಯಾ ವಿದ್ಯಾರ್ಥಿನಿಲಯದ ವಾರ್ಡ್‌ನ ಅವರ ಹಸ್ತ ಸಲ್ಲಿಸತಕ್ಕದ್ದು. ವಿಳಂಬವಾಗಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.