ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿಶ್ವ ಪರಿಸರ ದಿನ ಆಚರಣೆ

Rashmi Kasaragodu
Updated On : 8 Jun 2014, 2:07 am

ಹಾಸನ: ತಾಲೂಕಿನ ನಿಟ್ಟೂರು ಶಾಖಾ ಕಚೇರಿ ಹಾಗೂ ಐದಳ್ಳದ ರಂಗನಾಥಸ್ವಾಮಿ ಬೆಟ್ಟದಲ್ಲಿ ಇತ್ತೀಚೆಗೆ ಜೈವಿಕ ಇಂಧನದ (ಹೊಂಗೆ) ಮತ್ತು ಇತರೆ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ದುರ್ಬಳಕೆ, ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಪರಿಸರ ರಕ್ಷಿಸುವ ಬಗ್ಗೆ ತಿಳಿವಳಿಕೆ ನೀಡಲಾಯಿತು.  
ಜಾಗತಿಕ ತಾಪಮಾನದಿಂದ ಆಗುತ್ತಿರುವ ಹವಾಮಾನ ವೈಪರೀತ್ಯ, ವನ್ಯ ಮೃಗಗಳ ಅವನತಿ ಕುರಿತಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರಲ್ಲಿ ಚರ್ಚಿಸಲಾಯಿತು. ಅಲ್ಲದೆ ಸಾವಯವ ಕೃಷಿ ಹಾಗೂ ಕ್ರಿಮಿನಾಶಕಗಳ ಸಿಂಪಡಣೆ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ವಿತರಣಾ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement