ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಂಬಾಕು ದುಷ್ಪರಿಣಾಮ ಜಾಗೃತಿ

Rashmi Kasaragodu
Updated On : 9 Jun 2014, 1:22 am

ಮಂಡ್ಯ: ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಅನೇಕ ಅರಿವಿನ ಕಾರ್ಯಕ್ರಮಗಳನ್ನು ಹಾಕಿಕೊಂಡು ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಂಕರಪ್ಪ ತಿಳಿಸಿದರು.
ನಗರದಲ್ಲಿ ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ನಡೆದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ನಿಷೇಧ ಅಧಿನಿಯಮ -2013 ಕುರಿತು ಅಧಿಕಾರಿಗಳು ಮತ್ತು ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ತಂಬಾಕು ನಿಯಂತ್ರಣ ಕಾಯ್ದೆಯನ್ನು ಎಷ್ಟೇ ಪರಿಣಾಮಕಾರಿಯಾಗಿ ಜಾರಿ ಮಾಡಿದರೂ ರಾಜ್ಯದಲ್ಲಿ 18 ಲಕ್ಷ ತಂಬಾಕು ಸೇವಿಸುವರು ಇರುವುದು ಕಂಡು ಬಂದಿದೆ. ತಂಬಾಕು ಸೇವನೆಯಿಂದ ಹಲವು ಸಮಸ್ಯೆಗಳು ಎದುರಾಗಲಿದೆ. ಇವುಗಳಿಂದ ದೂರ ಇರುವಂತೆ ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.
ವ್ಯತಿರಿಕ್ತ ಪರಿಣಾಮ: ತಂಬಾಕು ಸೇವನೆಯಿಂದ ವ್ಯಕ್ತಿಯ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅಲ್ಲದೆ ಆತನ ಕುಟುಂಬ ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಂಭವವಿರುತ್ತದೆ. ಅಧಿಕಾರಿಗಳು ಗ್ರಾಮಾಂತರ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ತಂಬಾಕು ಸೇವೆನೆಯಿಂದ ಆಗುವ ಅಡ್ಡ ಪರಿಣಾಮಗಳನ್ನು ಜನರಿಗೆ ತಿಳಿ ಹೇಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್.ಮರೀಗೌಡ, ಡಾ.ಮಾರುತಿ, ಎಎಸ್ಪಿ ಪುಟ್ಟಮಾದಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement