ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕುಡಿವ ನೀರಿಗೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಸೂಚನೆ

Rashmi Kasaragodu
Updated On : 10 Jun 2014, 12:48 pm

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಎದುರುಸುತ್ತಿರುವ ಕಡೆ ಮೊದಲ ಅದ್ಯತೆ ನೀಡುವಂತೆ ಜಿಪಂ ಅಧ್ಯಕ್ಷೆ ಡಿ.ಜಿ.ಅಂಬಿಕರಾಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಪಂ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಇರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದ್ದು, ಅಗತ್ಯ ಇರುವ ಕಡೆ ಬೋರ್ವೆಲ್ಗಳನ್ನು ಕೊರೆಸಬೇಕು ಎಂದು ಹೇಳಿದರು.
ಜಿಪಂ ಅಧ್ಯಕ್ಷೆಯಾಗಿ 20 ತಿಂಗಳು ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿರುವುದಾಗಿ ತಿಳಿಸಿದರಲ್ಲದೆ, ಕೆಲಸ ಮಾಡಲು ಸಂಪೂರ್ಣ ಸಹಕಾರ ನೀಡಿದ್ದಕ್ಕಾಗಿ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿ, ಮುಂದೆ ಬರುವ ಅಧ್ಯಕ್ಷರಿಗೂ ಇದೇ ರೀತಿ ಸಹಕರಿಸುವಂತೆ ಕೋರಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ ಸರ್ಕಾರಕ್ಕೆ ಕುಡಿಯುವ ನೀರಿಗಾಗಿ 29 ಕೋಟಿ ರು.ಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, 9 ಕೋಟಿ ಮಂಜೂರಾಗಿದ್ದು, 4.66 ಕೋಟಿ ಹಣ ಬಂದಿದೆ ಎಂದ ಅವರು ಕುಡಿಯುವ ನೀರಿಗೆ ತೊಂದರೆ ಇರುವ ಕಡೆಗಳಿಗೆ ಅದ್ಯತೆ ಮೇಲೆ ಹಣ ವಿನಿಯೋಗಿಸಲಾಗುವುದು ಎಂದರು.
ಜಿಪಂ ಉಪಾಧ್ಯಕ್ಷ ಬಿಳಿ ಚೌಡಯ್ಯ ಮಾತನಾಡಿ, ಉಪಾಧ್ಯಕ್ಷನಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ ನೀಡಿದ್ದಕ್ಕಾಗಿ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ಜಿಪಂ ವಿವಿಧ ಸದಸ್ಯರು ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement