ಲೋಕಾಯುಕ್ತ ಕಾರ್ಯಕ್ರಮ
ಹಾಸನ: ಸಾರ್ವಜನಿಕ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮನವಿಗಳ ಹಾಗೂ ದೂರುಗಳ ಪರಿಶೀಲನೆಯಲ್ಲಿ ಜರುಗುತ್ತಿರುವ ವಿಳಂಬ, ಅಧಿಕಾರ ದುರುಪಯೋಗ, ಸರ್ಕಾರಿ ಹಣದ ದುರುಪಯೋಗ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ಬಗ್ಗೆ ಸಾರ್ವಜನಿಕರು ಸಲ್ಲಿಸುವ ದೂರು, ಅರ್ಜಿಗಳನ್ನು ಸ್ವೀಕರಿಸಿ ನೋಂದಾಯಿಸಿ ವಿಚಾರಣೆಗೆ ಒಳಪಡಿಸುವ ಕಾರ್ಯಕ್ರಮವನ್ನು ಜೂ. 23 ರಿಂದ 24 ರವರೆಗೆ ಬೆಳಗ್ಗೆ 10ರಿಂದ ಸಂಜೆಯವರೆಗೆ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣಾ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್ ಜೂ. 25 ರಂದು ಬೆಳಗ್ಗೆ 10.30ರಿಂದ ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಹಾಗೂ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಡಾ.ಸಿ.ಬಿ. ವೇದಮೂರ್ತಿ ಕೋರಿದ್ದಾರೆ.