ಎಸ್ಸೆಸ್ಸೆಲ್ಸಿ, ಪಿಯು; ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಹಾಸನ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿಯ ವತಿಯಿಂದ ಇತ್ತೀಚೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿ ಅಭಿನಂದಿಸುವ ಸಲುವಾಗಿ ಕೆರಿಯರ್ ಗೈಡೆನ್ಸ್, ಸ್ಕಾಲರ್ಶಿಪ್ ಮಾಹಿತಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಕೆರಿಯರ್ ಗೈಡೆನ್ಸ್ ಮತ್ತು ಸ್ಕಾಲರ್ಷಿಪ್ ಮಾಹಿತಿಯನ್ನು ಮಂಗಳೂರು ಮಾಹಿತಿ ಕೇಂದ್ರದ ಅಧ್ಯಕ್ಷ ಖಾದರ್ ನವುರ್ ನಡೆಸಿಕೊಟ್ಟರು.
ಸುಜಲಾ ಪಿಯು ಕಾಲೇಜು ಪ್ರಾಂಶುಪಾಲ ಜುಲ್ಫಿಕರ್ ಅಹಮದ್ ಮಾತನಾಡಿ, ಅಲ್ಪಸಂಖ್ಯಾತರು, ದಲಿತರು ಹಾಗು ಹಿಂದುಳಿದ ವರ್ಗದವರ ಶಿಕ್ಷಣ ವ್ಯವಸ್ಥೆಯ ವಸ್ತು ಸ್ಥಿತಿಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ದೌರ್ಜನ್ಯದ ವಿರುದ್ಧ ಹೋರಾಟ: ದಲಿತ ಸಂಘರ್ಷಸಮಿತಿ ಹಾಗೂ ರಿಪಬ್ಲಿಕ್ ಪಾರ್ಟಿ ಜಿಲ್ಲಾಧ್ಯಕ್ಷ ಸತೀಶ್ ಮಾತನಾಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ತಾರತಮ್ಯತೆಯ ವಿರುದ್ಧ ಹೋರಾಟಮಾಡಬೇಕೆಂದು ಕೇಳಿಕೊಂಡರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶಾಲಾ ಚಟುವಟಿಕೆಗಳಿಗೆ ಸೀಮಿತವಾಗದೆ ಇತರ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಬಹುಮಾನ ವಿತರಣೆ: ಕ್ಯಾಂಪಸ್ ಫ್ರಂಟ್ ಜಿಲ್ಲಾಸಮಿತಿ ವತಿಯಿಂದ ವಿದ್ಯಾಥಿಗಳಿಗೆ ಬಹುಮಾನ ವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಫೈರೋರ್ ಪಾಶ, ಎಸ್ಡಿಪಿಐ ಜಿಲ್ಲಾಧ್ಯಕ್ಷ ಸೂಫಿ ಇಬ್ರಾಹಿಂ ಇತರರು ಇದ್ದರು. ಉಮರ್ ಫಾರೂಖ್ ನಿರೂಪಿಸಿದರು.
13ಎಚ್ಎಸ್ಎನ್ 9ಪಿ- ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.