ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಾಲ ಕಾರ್ಮಿಕ ಪದ್ಧತಿಯಿಂದ ಅಭಿವೃದ್ಧಿಗೆ ಮಾರಕ

Srinivasa Murthy VN
Updated On : 13 Jun 2014, 11:04 am

ಅರಕಲಗೂಡು: ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಎಲ್ಲರ ಸಹಕಾರ ಅಗತ್ಯ ಎಂದು ನ್ಯಾಯಾಧೀಶ ಬಿ.ಕೆ. ಗಿರೀಶ್ ತಿಳಿಸಿದರು.
ತಾಲೂಕಿನ ಕೊಣನೂರಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇಶದ ಆಸ್ತಿಯಾಗಲಿ: ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ ದೇಶದ ಆಸ್ತಿಯನ್ನಾಗಿ ರೂಪಿಸಿದರೆ ಮಾತ್ರ ಪ್ರಗತಿ ಕಾಣಲು ಸಾಧ್ಯ. ಇದಕ್ಕೆ ವ್ಯತಿರಿಕ್ತವಾಗಿ ಇಂದು ವಿದ್ಯೆ ನೀಡಿ ಮಕ್ಕಳ ಭವಿಷ್ಯ ರೂಪಿಸಬೇಕಾದ ಪೋಷಕರೇ ಮಕ್ಕಳನ್ನು ಬಾಲ್ಯದಲ್ಲಿಯೇ ದುಡಿಮೆಗೆ ದೂಡುತ್ತಿದ್ದಾರೆ. ಇದು ದೇಶದ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಿರಿಯ ವಕೀಲ ಎ.ಆರ್. ಜನಾರ್ದನ ಗುಪ್ತ ಮಾತನಾಡಿ, ಹೋಟೆಲ್‌ಗಳು, ಮೆಕ್ಯಾನಿಕಲ್ ಶ್ಯಾಪ್ ಮತ್ತು ತೋಟಗಳಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚಿಕೊಳ್ಳುವುದು ಕಾನೂನು ಪ್ರಕಾರ ಅಪರಾಧ. ಇಂತಹ ಹೀನ ಪದ್ಧತಿಯನ್ನು ಎಲ್ಲರೂ ವಿರೋಧಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
 ಕಾನೂನು ಸೇವಾ ಕೇಂದ್ರ: ಈ ಸಂದರ್ಭದಲ್ಲಿ ಹೋಬಳಿ ಕೇಂದ್ರವಾದ ಕೊಣನೂರಿನಲ್ಲಿ ಹೊಸದಾಗಿ ಗ್ರಾಮ ಕಾನೂನು ಸೇವಾ ಕೇಂದ್ರ ತೆರೆಯಲಾಯಿತು.
ಗ್ರಾ.ಪಂ. ಅಧ್ಯಕ್ಷೆ ಎಸ್. ಸೌಮ್ಯ ಅಧ್ಯಕ್ಷತೆ ವಹಿಸಿದ್ದರು. ಮಾತನಾಡಿದರು. ಕಿರಿಯ ನ್ಯಾಯಾಧೀಶ ಕುರಾಣಿ ಕಾಂತ ಡಾಕು, ಎಚ್.ಆರ್. ನಂಜುಂಡೇಗೌಡ, ಬಿ.ಟಿ. ಚಂದ್ರಶೇಖರ್, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಸೂರ್ಯ ನಾರಾಯಣ ಮಾತನಾಡಿದರು.  ವಕೀಲ ಶಂಕರಯ್ಯ, ತಾ.ಪಂ. ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ಗ್ರಾ.ಪಂ. ಉಪಾಧ್ಯಕ್ಷ ನಾಗರಾಜು, ಸದಸ್ಯ ಎಸ್.ಕೆ. ಕೃಷ್ಣ, ದಿವಾಕರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement