ಪರಿಶಿಷ್ಟ ಜಾತಿ, ವರ್ಗ ಹಿತ ರಕ್ಷಣಾ ಸಮಿತಿ ಸಭೆ ನಾಳೆ
ಹಾಸನ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ವರ್ಗಗಳ ಹಿತ ರಕ್ಷಣಾ ಸಮಿತಿ ಸಭೆಯನ್ನು ಜೂನ್ 16ರಂದು ಮಧ್ಯಾಹ್ನ 3.30ಕ್ಕೆ ಚನ್ನರಾಯಪಟ್ಟಣ ತಾಲೂಕು ತಹಸೀಲ್ದಾರ್ ಅವರ ಕಚೇರಿಯಲ್ಲಿ ನಡೆಸಲಾಗುವುದು ಎಂದು ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ವರ್ಗಗಳ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಗೂ ತಹಸೀಲ್ದಾರ್‌ರ್ ತಿಳಿಸಿದ್ದಾರೆ.
ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ ನಾಳೆಯಿಂದ
ಹಾಸನ: ರಾಷ್ಟ್ರೀಯ ಬೀದಿ ವ್ಯಾಪಾರಿಗಳ ಕಾಯ್ದೆ 2009ನ್ನು ಅನುಷ್ಟಾನಗೊಳಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿದ್ದು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಟೌನ್ ವೆಂಡಿಂಗ್ ಕಮಿಟಿಯನ್ನು ರಚಿಸುವ ಬಗ್ಗೆ ನಿರ್ದೇಶನ ನೀಡಿರುವ ಮೇರೆಗೆ ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ.
ಈ ಸಂಬಂಧ ಹಾಸನ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿಗಳ ವ್ಯಾಪಾರಿಗಳ ಸಮೀಕ್ಷೆಯನ್ನು ಜೂನ್ 16ರಿಂದ 25ರವರೆಗೆ ನಗರಸಭೆಯ ಅಧಿಕಾರಿ, ಸಿಬ್ಬಂದಿಯವರು ನಡೆಸಲಿದೆ. ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ ಸಂಬಂಧ ಸೂಕ್ತ ಮಾಹಿತಿ ಹಾಗೂ ಸಹಕಾರ ನೀಡಬೇಕೆಂದು ನಗರಸಭೆ ಪ್ರಕಟಣೆ ತಿಳಿಸಿದೆ.