ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ

Srinivasa Murthy VN
Updated On : 15 Jun 2014, 9:07 am

ಅರಸೀಕೆರೆ: ಸರ್ಕಾರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅನೇಕ ಸವಲತ್ತುಗಳನ್ನು ನೀಡಿ ಉಚಿತ ಸಮವಸ್ತ್ರ, ಪುಸ್ತಕ, ಬಿಸಿಯೂಟ, ಸೈಕಲ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದರೂ ಪೋಷಕರು ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ವಿಷಾದಿಸಿದರು.
ಪಟ್ಟಣದ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ,  ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ಅನೇಕ ತರಬೇತಿ ನೀಡುತ್ತಿದ್ದರೂ ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಾದೃಷ್ಟಕರ ಸಂಗತಿ ಎಂದರು.
ಶಿಕ್ಷಣ ಗುಣಮಟ್ಟ ಹೆಚ್ಚಿಸಿ: ಸಮ್ಮೇಳನ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ,  ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗವುದೇ ಈ ಕಾರ್ಯಾಗಾರದ ಉದ್ದೇಶ. ಇಂತಹ ಮಹತ್ತರವಾದ ಜವಾಬ್ದಾರಿಯನ್ನು ಶಿಕ್ಷಕರು ಸಮರ್ಥವಾಗಿ ನಿಭಾಯಿಸಬೇಕೆಂದು ಕರೆ ನೀಡಿದರು. ಸಮ್ಮೇಳನದಲ್ಲಿ ಪುರಸಭೆ ಅಧ್ಯಕ್ಷ ಮೋಹನ್ ಕುಮಾರ್, ತಾಪಂ ಅಧ್ಯಕ್ಷೆ ಹೇಮಾವತಿ, ಎಂ.ಜಿ.ಬಸವರಾಜು,  ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement