ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸವಲತ್ತು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿ

Mainashree
Updated On : 18 Jun 2014, 10:43 am

ಹೊಳೆನರಸೀಪುರ: ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸುವಂತೆ ಇಲ್ಲಿನ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಮಾರ್ ಅವರು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಪಟ್ಟಣದ ಸೀತಾಲಕ್ಷ್ಮಿರಂಗಸ್ವಾಮಿ ಚಾರಿಟೆಬಲ್ ಟ್ರಸ್ಟಿನ ವತಿಯಿಂದ ಇಲ್ಲಿನ ಪಾರ್ಕ್ ಹಿಂಭಾಗದಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಸಾಧಿಸುವ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸುವಂತೆ  ಕರೆ ನೀಡಿದರು.
ಶಿಕ್ಷಣಕ್ಕೆ ಪ್ರೋತ್ಸಾಹ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರವು ರೂಪಿಸಿರುವ ಯೋಜನೆಗಳ ಜತೆಗೆ ಸಮುದಾಯವೂ ಕೂಡ ಬಡ ವಿದ್ಯಾರ್ಥಿಗಳ ಶಿಕ್ಷಣವನ್ನು ಪ್ರೊತ್ಸಾಹಿಸುವ ಸದುದ್ದೇಶದಿಂದ ಈ ರೀತಿಯಾಗಿ ಶೈಕ್ಷಣಿಕ ಪರಿಕರಗಳನ್ನು ನೀಡಲು ಮುಂದಾಗುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಮಾರ್ ತಿಳಿಸಿದರು.
ನಿವೃತ್ತ ಶಿಕ್ಷಕ ಆರ್.ಎಸ್.ನಾರಾಯಣರಾವ್ ಮಾತನಾಡಿ, ಹಿಂದೆಲ್ಲಾ ಶಿಕ್ಷಣಕ್ಕೆ ಇಷ್ಟೊಂದು ಮಟ್ಟಿನ ಯೋಜನೆಗಳು ಹಾಗೂ ಸಹಕಾರಗಳ ಇರಲಿಲ್ಲ, ಆದರೆ ಇತ್ತೀಚಿನ ಸರ್ಕಾರಗಲು ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಗುಣಮಟ್ಟದ ಅಭಿವೃದ್ಧಿ ಹಾಗೂ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಯಲು ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.  ಶಾಲೆಯ ಮುಖ್ಯ ಶಿಕ್ಷಕ ಮೈಲಾರಿ ಮಾತನಾಡಿದರು. ಟ್ರಸ್ಟಿನ ಎನ್.ಆರ್.ಗೋವಿಂದರಾಜು ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement