ದುದ್ದ ರಸ್ತೆ ಕಾಮಗಾರಿ ಬಗ್ಗೆ ಚರ್ಚೆ
ಹಾಸನ: ಹಾಸನ-ದುದ್ದ-ಅರಸೀಕೆರೆ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶುಕ್ರವಾರ ಅಧಿಕಾರಿಗಳ ಸಭೆಯನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನಡೆಸಿ ಜೂ.25ರಂದು ಸಚಿವರ ಕಚೇರಿಯಲ್ಲಿ ಸಭೆಯನ್ನು ಕರೆಯಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಹಾಸನ ವೃತ್ತದ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಭಿಜಿತ್ ಕಂಪನಿಯ ಗುತ್ತಿಗೆದಾರ, ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳನ್ನು ಸಭೆಗೆ ಕರೆಸಿ ಚರ್ಚೆ ನಡೆಸಲಾಯಿತು. ಈ ಸಂಬಂಧವಾಗಿ ಸಚಿವರು ತಮ್ಮ ಕಚೇರಿಯಲ್ಲಿ ಹಾಸನ ಜಿಲ್ಲಾಧಿಕಾರಿ, ತುಮಕೂರು ಜಿಲ್ಲಾಧಿಕಾರಿ, ಗುತ್ತಿಗೆದಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಭೆಯನ್ನು ಕರೆಯಲು ತೀರ್ಮಾನಿಸಲಾಯಿತು. ಎಚ್.ಡಿ. ದೇವೇಗೌಡರು ಮಾತನಾಡಿ, ಹಾಸನ-ದುದ್ದ-ಅರಸೀಕೆರೆ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆದಷ್ಟು ಬೇಗ ಆ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಭೆಯಲ್ಲಿ ಮಾತನಾಡುತ್ತಾ ಶಾಸಕ ಎಚ್.ಡಿ. ರೇವಣ್ಣಏನ್ ಕೆಲಸ ಹೇಳುತ್ತಾರೆ ಅದನ್ನು ಚಾಚೂತಪ್ಪದೆ ಮಾಡಬೇಕೆಂದರು.