ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯವೂ ನೆನಪಿರಲಿ

Mainashree
Updated On : 21 Jun 2014, 10:30 am

ಹಾಸನ: ದೇಶದಲ್ಲಿ ಮೂಲಭೂತ ಹಕ್ಕುಗಳ ಬಗ್ಗೆ ಹೆಚ್ಚು ಪ್ರಶ್ನೆಗಳ ಬಯಸಿ ಧ್ವನಿಗಳು ಕೇಳುತ್ತಿವೆ. ಆದರೆ ಕರ್ತವ್ಯಗಳ ಬಗ್ಗೆ ಗಮನ ಹರಿಸುತ್ತಿಲ್ಲ. ನಾವೂ ಜವಾಬ್ದಾರಿಗಳನ್ನು ಪೂರೈಸಿದಾಗ ಪರಿಪೂರ್ಣರಾಗಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಜೆ.ಸತೀಶ್ ಸಿಂಗ್ ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಸನ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಮೂಲಭೂತ ಕರ್ತವ್ಯಗಳು ಹಾಗೂ ಮೋಟಾರು ವಾಹನ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನುಗಳ ಉಲ್ಲಂಘನೆಯಾಗದಂತೆ ನಮ್ಮನ್ನು ನಾವು ನಿಯಂತ್ರಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮ ಪ್ರಜ್ಞೆ ನಮ್ಮನ್ನು ಮುನ್ನಡೆಸಬೇಕು. ನೈತಿಕ ಪ್ರಜ್ಞೆ ಎಲ್ಲರಲ್ಲೂ ಮೂಡಬೇಕು ಎಂದರು. ದೇಶದ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ರಾಷ್ಟ್ರ. ನೂರಾರು ಭಾಷೆ, ಸಂಸ್ಕೃತಿ ಆಚಾರ ವಿಚಾರಗಳ ನಡುವೆಯೂ ಪರಸ್ಪರ ಸಹೋದರರಂತೆ ಬಾಳುತ್ತಿದ್ದೇವೆ. ಇದು ಮತ್ತಷ್ಟು ನೀತಿಯುತವಾಗಿರಬೇಕು ಎಂದರು.
ನೆರವು ಉಚಿತ: ಪ್ರಧಾನ  ಸಿವಿಲ್ ನ್ಯಾಯಾಧೀಶೆ ಸರಸ್ವತಿ ಕೊಸಂದರ್ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರವು ಮಹಿಳೆಯರು, ಮಕ್ಕಳು ದುರ್ಬಲರು ಶೋಷಿತರಿಗಾಗಿ ಉಚಿತ ಕಾನೂನು ನೆರವನ್ನು ನೀಡುತ್ತಿದೆ ಅಲ್ಲದೆ ಜನಸಾಮಾನ್ಯರ ಬಳಿಗೆ ತೆರಳಿ ಕಾನೂನಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ ಮಾತನಾಡಿರು. ಗಣೇಶ್ ಉಡುಪ ಮತ್ತು ತಂಡದವರು ಪ್ರಾರ್ಥಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement