ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಟಿಸಿ ದುರಸ್ತಿಗೊಳಿಸದ ವಿರುದ್ಧ ಪ್ರತಿಭಟನೆ

Mainashree
Updated On : 26 Jun 2014, 10:09 am

ಹೊಳೆನರಸೀಪುರ: ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟುಹೋಗಿ ಹದಿನೈದು ದಿನಗಳಾದರೂ ದುರಸ್ತಿಗೊಳಿಸದೇ ನಿರ್ಲಕ್ಷ್ಯ ತಾಳಿರುವ ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವಿರುದ್ಧ ತಾಲೂಕಿನ ಕಡವಿನಕೋಟೆ ಗ್ರಾಮಸ್ಥರು ಪಟ್ಟಣದಲ್ಲಿನ ವಿದ್ಯುತ್ ಇಲಾಖೆಯ ಕಚೇರಿಯ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಡವಿನಕೋಟೆ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕ  ಕೆಟ್ಟು ನಿಂತಿರುವ ಬಗ್ಗೆ ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವನ್ನು ಖಂಡಿಸಿ ಇಲಾಖಾ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಕೂಡಲೇ ತಮ್ಮ ಗ್ರಾಮದಲ್ಲಿನ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಮಾಡಿದ್ದರೂ, ದೂರವಾಣಿಯಲ್ಲಿ ಉಡಾಫೆಯಿಂದ ಮಾತನಾಡುವ ಇಲ್ಲಿನ ವಿದ್ಯುತ್ ಇಲಾಖೆಯ ಅಧಿಕಾರಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಕಡವಿನಕೋಟೆ ಗ್ರಾಮಸ್ಥರು, ಕೂಡಲೇ ಸಂಬಂಧಿಸಿದ ಅಧಿಕಾರಿಯು ಸ್ಥಳಕ್ಕೆ ಬಂದು ಸಮಜಾಯಿಷಿ ನೀಡುವಂತೆ ಆಗ್ರಹಿಸಿದರು.
ವಿಷಯ ತಿಳಿದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಇಇ ನರಸಿಂಹಮೂರ್ತಿ ಅವರು ಪ್ರತಿಭಟನಾನಿರತರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಕೂಡಲೇ ವಿದ್ಯುತ್ ಪರಿರ್ತಕವನ್ನು ಬದಲಾಯಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಕಡವಿನಕೋಟೆ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement