ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಿಸಿಯೂಟದಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಳ

Mainashree
Updated On : 30 Jun 2014, 11:26 am

ಬೇಲೂರು: ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದ್ದು ಶೈಕ್ಷಣಿಕ ಗುಣಮಟ್ಟ ಹೆಚ್ಚಿದೆ ಎಂದು ಪೀಪಲ್ಸ್ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ  ಆರ್.ಎಸ್.ಸುಬ್ರಹ್ಮಣ್ಯ ಹೇಳಿದರು.
ಪೀಪಲ್ಸ್ ಎಜುಕೇಷನ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಕ್ಷರದಾಸೋಹ ಕಾರ್ಯಕ್ರಮದಡಿ ನಿರ್ಮಿಸಿರುವ ಅಡುಗೆ ಮನೆಯನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿ, ಬಿಸಿಯೂಟ ಆರಂಭಕ್ಕೆ ಮುಂಚೆ ಕೆಲವೊಂದು ಸಂದರ್ಭದಲ್ಲಿ ಹಳ್ಳಿಗಳಿಂದ ಬರುವ ಮಕ್ಕಳು ಊಟ ತರಲಾಗದೆ, ಹಸಿವಿನಿಂದ ಇರುವುದನ್ನು ನೋಡಿದ್ದೇವೆ. ಇದೀಗ ಆ ಸಮಸ್ಯೆ ಇಲ್ಲವಾಗಿದೆ ಎಂದರು.
ಸಂಸ್ಥೆ ಅಧ್ಯಕ್ಷೆ ಎಂ.ಎನ್.ಪದ್ಮಿನಿ ಮಾತನಾಡಿ, ಸರಕಾರ ಶೈಕ್ಷಣಿಕವಾಗಿ ಸಾಕಷ್ಟು ವೆಚ್ಚ ಮಾಡುತ್ತಿದೆ. ವಿದ್ಯಾರ್ಥಿಗಳು ದೊರಕುವ ಸೌಲಭ್ಯವನ್ನು ಪಡೆದು ಶೈಕ್ಷಣಿಕವಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯ ಶಿಕ್ಷಕ ಗಂಗೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement