ಆಧುನಿಕತೆ ಜೊತೆಗೆ ಪರಂಪರೆಯೂ ಇರಲಿ'
ಹಾಸನ: ಆಧುನಿಕ ಜೀವನ ಶೈಲಿಯ ಜತೆಗೆ ನಮ್ಮ ಪರಂಪರೆಯನ್ನು ಉಳಿಸಿ ಬೆಳಸಬೇಕೆಂದು ಎವಿಕೆ ಮಹಿಳಾ ಕಾಲೇಜು ಸಹ ಪ್ರಾಧ್ಯಾಪಕ ಡಾ. ಎಚ್.ಎಲ್. ಮಲ್ಲೇಶಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ಈಚೆಗೆ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಮನುಷ್ಯ ಇಂದು ಆಧುನಿಕ ಜೀವನಕ್ಕೆ ಹೊಂದಿಕೊಂಡು ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಮರೆಯುತ್ತಿದ್ದಾನೆ ಎಂದು ವಿಷಾದಿಸಿದರು.
ಮನುಷ್ಯ ಇಂದು ಆಧುನಿಕ ಜೀವನಕ್ಕೆ ಹೊಂದಿಕೊಂಡು ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಮರೆಯುತ್ತಿದ್ದಾನೆ ಎಂದು ವಿಷಾದಿಸಿದರು.
ಮೊಸಳೆಹೊಸಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಡಿ. ಶ್ರೀನಿವಾಸ ಮಾತನಾಡಿ, ಯುವತಿಯರು ಶಿಕ್ಷಣ ಹೊಂದಿದ್ದಲ್ಲಿ ಮಾತ್ರ ದೇಶ ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯ.
ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳಸುವ ಜವಾಬ್ದಾರಿ ಮಹಿಳೆಯರ ಮೇಲಿದ್ದು, ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ ಹೋಗದೆ ನಮ್ಮ ಪರಂಪರೆಯನ್ನು ಉಳಿಸಬೇಕು. ಮಹಿಳಾ ಆತ್ಮಹತ್ಯೆ ಪ್ರಕರಣಗಳು ಇಂದು ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಬೇಕಾದ ಅಗತ್ಯತೆ ಇದೆ ಎಂದರು.
ಪ್ರಾಧ್ಯಾಪಕ ಡಾ. ಶಶಿ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ, ಪ್ರಾಧ್ಯಾಪಕರಾದ ಎಚ್.ಆರ್. ಸುಲೋಚನಾ, ಎಸ್.ಆರ್. ಮೂರ್ತಿ, ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಕೆ.ಟಿ. ಕೃಷ್ಣೇಗೌಡ, ಉಪನ್ಯಾಸಕ ಎಚ್.ಕೆ. ದಿಲೀಪ್ ಕುಮಾರ್, ಗಿಡ್ಡೇಗೌಡ ಇತರರು ಇದ್ದರು.