ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆರೋಗ್ಯ ಅರಿವಿಗೆ ರೆಡ್ಕ್ರಾಸ್ ಕಾರ್ಯ ಶ್ಲಾಘನೀಯ: ಜಿಲ್ಲಾಧಿಕಾರಿ

Rashmi Kasaragodu
Updated On : 2 Mar 2014, 1:29 am

ಹಾಸನ: ಆರೋಗ್ಯ ಅರಿವು ಮೂಡಿಸುವ ಸಲುವಾಗಿ ದೇಶದಲ್ಲಿ ರೆಡ್ಕ್ರಾಸ್ ಘಟಕ ಆರಂಭಿಸಲಾಗಿದ್ದು, ಯುವಕರು ಇದರಲ್ಲಿ ತೊಡಗಿಸಿ ಕೊಳ್ಳುವ ಮೂಲಕ ಆರೋಗ್ಯ ಅರಿವು ಮೂಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ನುಡಿದರು.ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ಕ್ರಾಸ್ ಮಹಿಳಾ ಘಟಕ, ಹಾಸನಾಂಬ ಉಚಿತ ದಂತ ವೈದ್ಯಕೀಯ ಕಾಲೇಜಿನ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿನಿಯರ ಉಚಿತ ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಯುವಕರಿಗೆ ಆರೋಗ್ಯ ಬಹು ಮುಖ್ಯವಾಗಿದ್ದು, ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು. ರೆಡ್ಕ್ರಾಸ್ ಘಟಕದ ಮೂಲಕ ರಕ್ತದಾನದ ಮಹತ್ವ, ದಂತ ಚಿಕಿತ್ಸೆ ಹಾಗೂ ಇನ್ನಿತರ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವಂತಾಗಬೇಕು ಎಂದರು.
ಡಾ. ವಿವೇಕಾನಂದ ಮಾತನಾಡಿ, ದಂತಗಳನ್ನು ಶುಚಿಯಾಗಿ ಇಟ್ಟಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement