ಉಪ್ಪಾರ ಸಂಘದ ಸಮಾವೇಶಕ್ಕೆ ಜಿಲ್ಲೆಯಿಂದ 10 ಸಾವಿರ ಮಂದಿ
ಚನ್ನರಾಯಪಟ್ಟಣ: ರಾಜ್ಯ ಉಪ್ಪಾರ ಸಂಘದ ರಾಜ್ಯ ಮಟ್ಟದ ಬೃಹತ ಸಮಾವೇಶ ಮಾ.2ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ ಬೆಳಗ್ಗೆ 11 ಕ್ಕೆ ನಡೆಯಲಿದ್ದು, ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿ, ಅಧ್ಯಕ್ಷತೆಯನ್ನು ಛಚಾಮರಾಜನಗರದ ಶಾಸಕ ಸಿ. ಪುಟ್ಟರಂಗಶೆಟ್ಟಿ ವಹಿಸಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ತಾಲೂಕಿನಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಉಪ್ಪಾರ ಸಮಾಜದವರು ಭಾಗವಹಿಸಲಿದ್ದಾರೆ ಎಂದು ತಾಲೂಕು ಉಪ್ಪಾರ ಸಂಘದ ಪ್ರಕಟಣೆ ತಿಳಿಸಿದೆ. ್ಛ
ನಾಳೆ ವಿದ್ಯಾರ್ಥಿಗಳೊಂದಿಗೆ ಎಚ್.ಡಿ.ದೇವೇಗೌಡ ಸಂವಾದ
ಹಾಸನ: ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಮಾ.3 ರಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಧ್ಯಾಹ್ನ 2ಕ್ಕೆ 2011-12ನೇ ಸಾಲಿನ ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿ, ಸಭಾಂಗಣ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಾಜಿ ಪ್ರಧಾನಿ, ಹಾಲಿ ಸಂಸದ ಎಚ್.ಡಿ.ದೇವೇಗೌಡ ಉದ್ಘಾಟನೆ ನೆರವೇರಿಸಿ, ಭಾಷಣ ಮಾಡಲಿದ್ದಾರೆ.
ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಶಾಸಕ ಎಚ್.ಎಸ್.ಪ್ರಕಾಶ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.