ಕಾಚೇನಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಕ್ಕೆ ಕ್ರಮ
ಹಾಸನ: ಚನ್ನರಾಯಪಟ್ಟಣ ತಾಲೂಕಿನ ಕಾಚೇನಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು 1992-93 ರಲ್ಲಿ ಪ್ರಾರಂಭಿಸಲಾಗಿದ್ದು, ಜ. 2014ರ ಅಂತ್ಯದವರೆಗೆ ರು. 61.33 ಕೋಟಿ ವೆಚ್ಚವಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಾನಪರಿಷತ್ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಕಾಚೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಚನ್ನರಾಯಪಟ್ಟಣ ತಾಲೂಕಿನ ಕಾಚೇನಹಳ್ಳಿ ಗ್ರಾಮದ ಸಮೀಪ ಹೇಮಾವತಿ ನದಿಯಿಂದ 0.73 ಟಿ.ಎಂ.ಸಿ ನೀರನ್ನು ಮೂರು ಹಂತಗಳಲ್ಲಿ ಎತ್ತಿ 12,600 ಎಕರೆ (510 ಹೆಕ್ಟೇರ್) ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು. ಮೊದಲನೇ ಹಂತದ ಕಾಮಗಾರಿ ವಿದ್ಯುತ್ ಸಂಪರ್ಕ ಹೊರತುಪಡಿಸಿ ಪೂರ್ಣಗೊಂಡಿರುತ್ತದೆ. ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಮೂರನೇ ಹಂತದ ಕಾಮಗಾರಿಗಳನ್ನು ಕೈಗೊಂಡಿರುವುದಿಲ್ಲ ಎಂದರು.