ವಿಶ್ವ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆ
ಅರಸೀಕೆರೆ: ಪಟ್ಟಣದ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಇವರ ವತಿಯಿಂದ ವಿಶ್ವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ವೈ.ಎಸ್. ವೀರಭದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಲಾರ್ಡ್ ಬೇಡನ್ ವೊವೆಲ್ರವರು ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಾರಂಭಿಸಿದ ಹಿನ್ನಲೆ ಹಾಗೂ ಬೆಳೆದು ಬಂದ ಇತಿಹಾಸವನ್ನು ವಿವರಿಸಿದರು. ಸಾಮಾಜಿಕ ಸೇವೆಯಲ್ಲಿ ಸ್ಕೌಟಿಂಗ್, ಗೈಡಿಂಗ್ನ ಶಿಕ್ಷಣ ಸಾಮಾಜಿಕ ಸೇವೆಯ ಕುರಿತಾಗಿ ಉತ್ತಮ ಶಿಕ್ಷಣ ನೀಡಬಲ್ಲದು ಎಂದರು. ಸಹಾಯಕ ಜಿಲ್ಲಾ ಆಯುಕ್ತ ಜಿ.ಕೆ. ಗಂಗಾಧರ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಜೆ.ಎಲ್. ಲೀಲಾಮಹೇಶ್ವರ್ ಇದ್ದರು.