ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಅಹೋರಾತ್ರಿ ಧರಣಿ

Srinivasa Murthy VN
Updated On : 3 Mar 2014, 10:34 am

ಕ.ಪ್ರ. ವಾರ್ತೆ ಅರಸೀಕೆರೆ  ಮಾ.3
ಸತತ ಬರಗಾಲದಿಂದ ತತ್ತರಿಸಿರುವ ತಾಲೂಕಿನಲ್ಲಿ ಕೂಡಲೇ ಬರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ತಾಲೂಕಿನ ಎಲ್ಲ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಸೋಮವಾರ ರೈತರು ಅಹೋರಾತ್ರಿ ಧರಣಿ ಆರಂಭಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ತಾಲೂಕು ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವಿಲ್ಲದೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದು, ಮಳೆಯ ಅಭಾವದಿಂದ 8 ಲಕ್ಷಕ್ಕೂ ಹೆಚ್ಚು ತೆಂಗಿನ ಮರಗಳು ಸುಳಿ ಬಿದ್ದು ನಾಶವಾಗಿದ್ದು, ಮುಂಗಾರು-ಹಿಂಗಾರು ಬೆಳೆಗಳು ರೈತರ ಕೈಗೆ ಬಾರದೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದರೂ ಸರ್ಕಾರವಾಗಲಿ, ಜನಪ್ರತಿನಿಧಿಗಳಾಗಲಿ ಸಂಕಷ್ಟಕ್ಕೆ ಸ್ಪಂದಿಸದೆ ಇರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
ರಾಜ್ಯ ರೈತ ಸಂಘದ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ತಾಲ್ಲೂಕಿನ ಜನತೆ ಬರದ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಪರಿಸ್ಥಿತಿ ಹೀಗಿದ್ದರೂ ಸಂಬಂಧಿಸಿದ ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಸ್ಪಂದಿಸುತ್ತಿಲ್ಲ. ತಾವು ಮಾಡಿರುವ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ಈವರೆಗೂ ದೊರೆತಿಲ್ಲ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕಾಗಮಿಸಿ ನೊಂದವರ ಗೋಳು ಆಲಿಸಬೇಕು. ಪರಿಹಾರಗಳನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಂಡು ತಾಲೂಕಿನ ರೈತ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ತಹಸೀಲ್ದಾರ್ ಕೇಶವಮೂರ್ತಿ ಸ್ಥಳಕ್ಕಾಗಮಿಸಿ ತಮ್ಮ ಹೋರಾಟದ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಪ್ರತಿಭಟನೆ ಹಿಂತೆಗೆದುಕೊಳ್ಳಬೇಕೆಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಹಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕರೀಂ ಸಾಬ್, ರೈತ ಸಂಘದ ಗೌರವಾಧ್ಯಕ್ಷ ಜವನಹಳ್ಳಿ ನಿಂಗಪ್ಪ, ಲಕ್ಕಮ್ಮ, ಜಯರಾಮ್, ಚಂದ್ರಪ್ಪ, ಸಾದಿಕ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement