ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಏ.12 ರವರೆಗೆ 2ನೇ ಹಂತದ ಲೋಕ ಅದಾಲತ್

Vishwanath S
Updated On : 6 Mar 2014, 12:45 pm

ಹಾಸನ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ್ಥಪಡಿಸಿಕೊಳ್ಳಲು 2ನೇ ಹಂತದ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಏ. 12ರವರೆಗೆ ಹಮ್ಮಿಕೊಂಡಿದ್ದು, ಅದರ ಪ್ರಯೋಜನವನ್ನು ಸಾರ್ವಜನಿಕರು ಪಡಿದುಕೊಳ್ಳುವಂತೆ ಜಿಲ್ಲಾ ಸತ್ರ ಹಾಗೂ ಪ್ರಧಾನ ನ್ಯಾಯಾಧೀಶ ವಿ.ಜಿ. ಬೋಪಯ್ಯ ತಿಳಿಸಿದ್ದಾರೆ.
ನಗದರ ಜಿಲ್ಲಾ ನ್ಯಾಯಾಲಯದ ಆವರಣದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರದಾದ್ಯಂತ 2013ರ ನವೆಂಬರ್‌ನಲ್ಲಿ ಪ್ರಥಮ ಬಾರಿಗೆ ಜನತಾ ನ್ಯಾಲಯವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಎಲ್ಲಾ ರೀತಿಯ ಪ್ರಕರಣಗಳು ಸೇರಿದಂತೆ ಒಟ್ಟು 95,178 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ 6176 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಪ್ರಧಾನ ಸಿವಿಲ್ ಜಡ್ಜ್ ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೋಸಂದರ್ ಅವರು ಮಾತನಾಡಿ, ಜನತೆ ಈ ಲೋಕ ಅದಾಲತ್‌ನ ಸದುಪಯೋಗ ಪಡೆದುಕೊಳ್ಳುವ ಮೂಲಕ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಹಣ ಪಾವತಿಸಲು ಬಾಕಿ ಇರುವ ಬಿಎಸ್‌ಎನ್‌ಎಲ್ ಮತ್ತು ವಿದ್ಯುತ್ ಬಿಲ್‌ಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.
ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಆರ್. ಪರಮೇಶ್ ಮಾತನಾಡಿ, ಈ ಅದಾಲತ್‌ನಲ್ಲಿ ಕಳೆದ ಬಾರಿಗಿಂತಲು ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲು ವಕೀಲರೆಲ್ಲರೂ ಸಹಕಾರ ನೀಡುವುದರ ಮೂಲಕ ಈ ಬಾರಿಯೂ ಮೊದಲ ಸ್ಥಾನ ಪಡೆಯುವುದಾಗಿ ಆಶಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement