ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಾಗೃತಿಗಾಗಿ 'ಸ್ವೀಪ್‌'

Vishwanath S
Updated On : 8 Mar 2014, 12:59 pm

ಹಾಸನ: ಲೋಕಸಭಾ ಚುನಾವಣಾ ನಿಮಿತ್ತ ಮತದಾನದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಚುರುಕುಗೊಳಿಸಬೇಕಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗತ್ವ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಮತದಾರರ ಸಮೀಕ್ಷೆ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಡಿಮೆ ಮತದಾನ ನಡೆದ ಮತಗಟ್ಟೆಗಳನ್ನು ಗುರುತಿಸಿದ್ದು, ಅಂತಹ ಸ್ಥಳಗಳನ್ನು ಈಗಾಗಲೇ ಚುನಾವಣಾಧಿಕಾರಿ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ.  ಇಲ್ಲಿ ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕರ, ಸ್ವಯಂ ಸೇವಕರು, ವಿದ್ಯಾರ್ಥಿಗಳ ಸಹ ಯೋಗದೊಂದಿಗೆ ಮನೆ ಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಮತದಾರರ ಅನಿಸಿಕೆಗಳ ಸಮೀಕ್ಷೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ನಾನಾ ಕಾರ್ಯಕ್ರಮ: ಮತದಾರರಲ್ಲಿ ಜಾಗೃತಿ ಮೂಡಿಸಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗದಲ್ಲಿ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು. ಕಳೆದ ಚುನಾವಣಾ ಸಂದರ್ಭದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ನಾನಾ ಕಾರ್ಯಕ್ರಮಗಳನ್ನು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮುಂದುವರೆಸಲು ಕಾರ್ಯೋನ್ಮುಖರಾಗಬೇಕು ಎಂದರು.
ಅವಕಾಶ: ಮಾ. 16ರವರೆಗೆ ಮತದಾರರ ನೊಂದಣಿ, ಮತಪಟ್ಟಿ ಮಾರ್ಪಾಡು ಹಾಗೂ ಇತರೆ ಪ್ರಕ್ರಿಯೆಗಳಿಗೆ ಚುನಾವಣಾ ಆಯೋಗ ಅವಕಾಶ ನೀಡಿದೆ ಎಂದು ಅವರು ತಿಳಿಸಿದರು.  ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ಯಾಮಲಾದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್. ಬಸವರಾಜ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ, ಕ್ಷೇತ್ರ ಪ್ರಚಾರ ಇಲಾಖೆಯ ಪ್ರಕಾಶ್, ಸ್ವೀಪ್ ಸಮಿತಿಯ ಇತರೆ ಅಧಿಕಾರಿಗಳು ಹಾಜರಿದ್ದು ಹಲವು ಸಲಹೆಗಳನ್ನು ನೀಡಿದರು. ಸ್ವೀಪ್ಸ್‌ಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿನೋದ್ಚ್‌ಂದ್ರ ಈವರೆಗೆ ಆಗಿರುವ ಸಿದ್ಧತೆ, ಕ್ರಿಯಾ ಯೋಜನೆ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement