ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ದೇವೇಗೌಡರು ಪ್ರಧಾನಿಯಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದರು'

Vishwanath S
Updated On : 13 Mar 2014, 1:35 am

ಸಕಲೇಶಪುರ: ದೇಶದ ಪ್ರಧಾನಿ ಪದವಿಗೆ ಏರುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ದೇವೇಗೌಡರಿಗೆ ಮತ ನೀಡುವಂಥ ಸೌಭಾಗ್ಯ ಜಿಲ್ಲೆಯ ಜನರಿಗೆ ಲಭಿಸಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ. ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಮತ್ಸದ್ದಿಯ ಕೊನೆಯ ಚುನಾವಣೆಯಲ್ಲಿ ಅತಿಹೆಚ್ಚಿನ ಮತಗಳಿಂದ ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಯನ್ನು ಪೂರೈಸಲು ನೆರವಾಗಬೇಕು ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇವೆಗೌಡರ ಗೆಲುವಿಗಾಗಿ ಜೆಡಿಎಸ್ ಕಾರ್ಯಕರ್ತರು ಸೇನಾನಿಗಳಂತೆ ಹೋರಾಟ ನಡೆಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ ರೇವಣ್ಣ ಹೇಳಿದರು.
ಋಣಿಗಳನ್ನಾಗಿಸಿದ್ದಾರೆ: ದೇವೇಗೌಡರಿಗೆ ರಾಜಕೀಯ ಶಕ್ತಿ ತುಂಬಿದ ಸಕಲೇಶಪುರ ತಾಲೂಕಿನ ಅಭಿವೃದ್ಧಿಗೆ ನಮ್ಮ ಆಡಳಿತದ ಅವಧಿಯಲ್ಲಿ ಸಾಕಷ್ಟು ಅನುದಾನ ನೀಡಲಾಗಿದೆ. ಇದರಿಂದಾಗಿಯೇ ಕ್ಷೇತ್ರದ ಮತದಾರರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 33 ಸಾವಿರ ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿಯನ್ನು ಚುನಾಯಿಸುವ ಮೂಲಕ ನಮ್ಮನ್ನು ಋಣಿಗಳನ್ನಾಗಿ ಮಾಡಿದ್ದಾರೆ ಎಂದರು.
ಜೆಡಿಎಸ್ ಬೆಂಬಲಿಸಿ: ಹಿಂದಿಗಿಂತಲೂ ಹೆಚ್ಚಿನ ಸೇವೆ ಸಲ್ಲಿಸಲು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳನ್ನು ಕ್ಷೇತ್ರದ ಮತದಾರರು ಜೆಡಿಎಸ್ ಅಭ್ಯರ್ಥಿಗೆ ನೀಡಬೇಕು ಎಂದು ಮನವಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕ ಬಿ.ವಿ ಕರಿಗೌಡ, ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್, ಮುಖಂಡರಾದ ಕೆ.ಎಂ ರಾಜೇಗೌಡ, ಜಿಪಂ ಸದಸ್ಯೆ ಸುಲೋಚನಾ, ತಾಲೂಕು ಅಧ್ಯಕ್ಷ ಕೆ.ಎಲ್. ಸೋಮಶೇಖರ್  ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement