ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪರಮಶಿವಯ್ಯ ನಿಧನಕ್ಕೆ ರೈತ ಸಂಘ, ಕರವೇ ಶ್ರದ್ಧಾಂಜಲಿ

Srinivasa Murthy VN
Updated On : 14 Mar 2014, 12:27 pm

ಅರಸೀಕೆರೆ: ರಾಜ್ಯದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಒದಗಿಸಲು ಅನೇಕ ಯೋಜನೆಗಳನ್ನು ರೂಪಿಸಿ ಸರ್ಕಾರದ ಮುಂದಿಟ್ಟ  ಜಿ.ಎಸ್. ಪರಮಶಿವಯ್ಯ ಅವರು ದೇಶ ಕಂಡ ಶ್ರೇಷ್ಠ ನೀರಾವರಿ ತಜ್ಞರಲ್ಲಿ ಒಬ್ಬರಾಗಿದ್ದರು ಎಂದು ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.
ಸರ್ಕಾರಗಳು ವಿಫಲ: ಖ್ಯಾತ ನೀರಾವರಿ ತಜ್ಞ ಡಾ. ಜಿ.ಎಸ್. ಪರಮಶಿವಯ್ಯ ನಿಧನದ ಹಿನ್ನೆಲೆಯಲ್ಲಿ ತಾಲೂಕು ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮೃತರ ಗೌರವಾರ್ಥ ಏರ್ಪಡಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮಶಿವಯ್ಯ ಅವರು ಅನೇಕ ಯೋಜನೆಗಳನ್ನು ರೂಪಿಸಿದರೂ ಅವುಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ದೂರಿದರು.
ತುಂಬಲಾರದ ನಷ್ಟ: ಬರಪೀಡಿತ ಪ್ರದೇಶಗಳಿಗೆ ಸಂಪೂರ್ಣ ನೀರಾವರಿ ಒದಗಿಸುವ ಯೋಜನೆ ಅನುಷ್ಟಾನಕ್ಕೆ ತರುವಲ್ಲಿ ವಿಫಲವಾದ ಸರ್ಕಾರಗಳು ಅವರ ಹೋರಾಟದ ಫಲವಾಗಿ ಇತ್ತೀಚಿಗೆ ಎತ್ತಿನಹೊಳೆ ಯೋಜನೆ ಅನುಷ್ಟಾನಕ್ಕೆ ಬಂದಿತ್ತು. ಆದರೆ, ಅವರ ನಿಧನ ರೈತ ಸಮುದಾಯಕ್ಕೆ, ತಾಂತ್ರಿಕ ವಲಯಕ್ಕೆ ತುಂಬಲಾರದ ನಷ್ಟವೆಂದು ಬಣ್ಣಿಸಿದರು. ಕರವೇ ಅಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಜವನಹಳ್ಳಿ ನಿಂಗಪ್ಪ, ಕಿರಣ್ ಗೌಡ, ಹಾರನಹಳ್ಳಿ ಲಕ್ಕಮ್ಮ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement