ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹಾಸನದಲ್ಲಿ ತ್ರಿಕೋನ ಸ್ಪರ್ಧೆ: ಶಾಸಕ ಸಿ.ಟಿ. ರವಿ

Srinivasa Murthy VN
Updated On : 14 Mar 2014, 12:30 pm

ಹಾಸನ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದ್ದು, ಹಾಸನ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಎರ್ಪಡಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಈ ಭಾರಿಯೂ ಪಡೆಯಲಿದೆ ಎಂದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆಯಾಗಲಿದ್ದು, ನಮ್ಮ ಪಕ್ಷದ ಅಭ್ಯರ್ಥಿಯು ಸಮರರ್ಥಿದ್ದಾರೆ. ಆದ್ದರಿಂದ ಭಾರಿ ಹಣಾಹಣಿ ನಡೆಯಲಿದ್ದು, ಪಕ್ಷದ ವರವಾಗಿ ಮತದಾರರ ಒಲವಿರುವುದರಿಂದ ಅಭ್ಯರ್ಥಿಯ ಗೆಲುವು ಸಾಧಿಸಲಿದ್ದಾರೆ ಎಂದರು.
ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದಿಂದ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿನೂತನ ಪ್ರಯೋಗ ಮಾಡಿ ಗೆಲುವು ಸಾಧಿಸಿತ್ತು. ಅದೇ ರೀತಿ ಈ ಬಾರಿಯು ಹಾಸನ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಇತರೆ ಭಾಗಗಳಲ್ಲಿ ಪ್ರಯೋಗ ಮಾಡಲು ಮುಂದಾಗಿದೆ ಎಂದ ಅವರು, ಮಾಜಿ ಸಂಸದ ವಿಜಯ್‌ಶಂಕರ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಮಾಡಲು ಪಕ್ಷದಲ್ಲಿ ಚರ್ಚೆ ನಡೆದಿದೆ. ಈ ಹಿಂದೆ ಡಿ.ಬಿ. ಚಂದ್ರೇಗೌಡ, ಸಾಂಗ್ಲಿಯಾನ ಅವರು ಬೇರೆ ಕ್ಷೇತ್ರದವರಾದರು ಬೆಂಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿ ಗೆಲುವು ಪಡೆದಿದ್ದನ್ನು ನೆನಪಿಸಿದರು.
ಈ ಬಾರಿಯೂ ಅದೇ ಪ್ರಯೋಗ ಬಿಜೆಪಿ ಮಾಡಿ ಚುನಾವಣೆಯಲ್ಲಿ ಲಾಭ ಪಡೆಯಲಿದೆ. ವಿಜಯ್‌ಶಂಕರ್ ಸದ್ಯಕ್ಕೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರಬಹುದು. ಆದರೆ ಯಾವುದೇ ಕಾರಣಕ್ಕೂ ಪಕ್ಷ ಬಿಡಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿ ಅವರು, ಹಾಸನದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂದು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಆದರೂ ಅಚ್ಚರಿಯ ಫಲಿತಾಂಶ ಕಾದಿದೆ. ನಮೋ ಅಲೆಯ ಮುಂದೆ ಹಳೆ ಮತ್ತು ಹೊಸ ಮುಖಗಳು ತೇಲಿ ಹೋಗುತ್ತಾರೆ ಎಂದು ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಮಾಜಿ ಅಧ್ಯಕ್ಷರಾದ ನವಿಲೆ ಅಣ್ಣಪ್ಪ, ಕೃಷ್ಣೇಗೌಡ, ಬಿಜೆಪಿ ಮುಖಂಡ ಎಂ.ಬಿ.ಗುರುಪ್ರಸಾದ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement