ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವ್ಯಾಪಾರೀಕರಣದಿಂದ ಕಲೆ, ಸಂಸ್ಕೃತಿ ಮಾಯ: ಡಾ. ಹಂಪನಹಳ್ಳಿ ವಿಷಾದ

Srinivasa Murthy VN
Updated On : 16 Mar 2014, 12:26 pm

ಚನ್ನರಾಯಪಟ್ಟಣ: ಮನುಷ್ಯ ವ್ಯಾಪಾರೀಕರಣದ ವಸ್ತುವಾಗುತ್ತಿರುವುದರಿಂದ ಕಲೆ ಸಂಸ್ಕೃತಿ ಅವನಿಂದ ಮಾಯವಾಗುತ್ತಿವೆ ಎಂದು ಜಾನಪದ ತಜ್ಞ ಡಾ. ಹಂಪನಹಳ್ಳಿ ತಿಮ್ಮೇಗೌಡ ವಿಷಾದಿಸಿದರು.
ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ವಿದ್ಯಾಲಯ ಹಾಗೂ ಕರ್ನಾಟಕ ಜಾನಪದ ಪರಿಷತ್ನ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನದಲ್ಲಿ ಮನುಷ್ಯ ಹಣ ಮಾಡುವ ಆಸೆಯಿಂದ ತನ್ನನ್ನು ತಾನೇ ಮಾರಾಟ ಮಾಡಿಕೊಳ್ಳುತ್ತಿದ್ದು, ತನ್ನಲ್ಲಿನ ಕಲೆ ಸಂಸ್ಕೃತಿಯನ್ನು ಮರೆತು ಕೇವಲ ಹಣ ಗಳಿಕೆಯನ್ನೇ ತನ್ನ ಗುರಿಯಾಗಿಸಿಕೊಂಡಿದ್ದಾನೆ ಎಂದು ತಿಳಿಸಿದರು.
ಜಾನಪದ ತಜ್ಞ ಮೇಟಿಕೆರೆ ಹಿರಿಯಣ್ಣ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ  ದೇವರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕು ಅಧ್ಯಕ್ಷ ಶಿವನಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಕೆ.ರಘು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಂಬೂರಿ ಕಲಾವಿದೆ ಲಕ್ಷಮ್ಮ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement