ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸ್ವೀಪ್ ಚಟುವಟಿಕೆಗೆ ವಿಶೇಷ ತರಬೇತಿ

Srinivasa Murthy VN
Updated On : 16 Mar 2014, 12:26 pm

ಹಾಸನ: ಮತದಾರರ ಜಾಗೃತಿ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಲು ಸ್ವೀಪ್ ಸಮಿತಿ ಮುಂದಾಗಿದೆ. ಅದಕ್ಕಾಗಿ ತಾಲ್ಲೂಕು ಮಟ್ಟದ ಸ್ವೀಪ್ ಸಮಿತಿಗಳನ್ನು ರಚಿಸಿ, ಪ್ರತಿ ತಾಲ್ಲೂಕುಗಳಲ್ಲೂ ಪರಿಣಾಮಕಾರಿಯಾದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ. ಇದಲ್ಲದೆ ಜಿಲ್ಲೆಯ ಎಲ್ಲಾ ಕಾಲೇಜುಗಳ ಎನ್ಎಸ್ಎಸ್ ಅಧಿಕಾರಿಗಳಿಗೂ ವಿಶೇಷ ತರಬೇತಿ ನೀಡಲಾಗಿದೆ.
ಜಿಪಂ ಹೇಮಾವತಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ನಾನಾ ಕಾಲೇಜುಗಳ ಎನ್ಎಸ್ಎಸ್ ಅಧಿಕಾರಿಗಳಿಗೆ ಸ್ವೀಪ್ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬಗ್ಗೆ ಮತ್ತು ಕಾಲೇಜಿನ ಒಳಗೆ ಹಾಗೂ ಸಾರ್ವಜನಿಕವಾಗಿ ಹೇಗೆ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರ ಪಾಲ್ಗೊಳ್ಳುವಿಕೆ ಅಗತ್ಯವಿರುವುದರಿಂದ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿಯಿಂದ ಅನೇಕ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರಾಮುಖ್ಯತೆ ದೊರೆಯುತ್ತದೆ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ನೀಡುವುದರಿಂದ, ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡುವುದರ ಜೊತೆಗೆ ಅವರ ಕುಟುಂಬಕ್ಕೂ ಮಾಹಿತಿ ರವಾನೆಯಾಗುತ್ತದೆ. ಆ ಮೂಲಕ ಸಮಾಜದ ಇತರ ಜನರಿಗೂ ಮತದಾನದ ಪ್ರಾಮುಖ್ಯತೆ ತಿಳಿಯುತ್ತದೆ ಎಂದರು.
ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವಿನೋದ್ ಚಂದ್ರ ಮಾತನಾಡಿ, ಈವರೆಗೆ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿರುವ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಸರ್ಕಾರಿ ವಿಜ್ಞಾನ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕೃಷ್ಣಪ್ಪ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾನಾ ಕಾಲೇಜುಗಳ ಎನ್ಎಸ್ಎಸ್ ಅಧಿಕಾರಿಗಳು, ಜಿಪಂ ಸಹ ಕಾರ್ಯದರ್ಶಿ ಮಂಜುನಾಥ, ಕ್ಷೇತ್ರ ಪ್ರಚಾರ ಇಲಾಖೆಯ ಪ್ರಕಾಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement