ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಡ್ಡಾಯ ಮತದಾನ ಕುರಿತು ಪ್ರತಿಜ್ಞೆ ಸ್ವೀಕಾರ

Mainashree
Updated On : 17 Mar 2014, 9:25 am

ಹಾಸನ: ಪ್ರಜಾಪ್ರಭುತ್ವ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳಿಗೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಕಡ್ಡಾಯವಾಗಿ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿಯನ್ನು ಸೋಮವಾರ ಕಾಲೇಜು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ನಗರದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಯುವ ಮತದಾರರಿಗೆ ಪ್ರತಿಜ್ಞೆ ವಿಧಿಯನ್ನು ತಾಲ್ಲೂಕು ನೋಡಲ್ ಅಧಿಕಾರಿ ಟಿ. ಶಿವಣ್ಣ ಭೋದಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಕೃಷ್ಣಪ್ಪ, ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಹಾಗೂ ವಿದ್ಯಾರ್ಥಿಗಳನ್ನು ಕಾಣಬಹುದು.
ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಯುವ ಮತದಾರರಿಗೆ ಪ್ರತಿಜ್ಞೆ ವಿಧಿಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಎ.ಎಲ್. ಮುರಳಿಧರ್ ಬೋಧಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಕೃಷ್ಣಪ್ಪ, ಪ್ರೊ. ಕವಿತ, ಉಪನ್ಯಾಸಕಿ ಹಾಗೂ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಹಾಗೂ ವಿದ್ಯಾರ್ಥಿಗಳನ್ನು ಕಾಣಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement