ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯಾರ್ಥಿಗಳಿಗೆ ಗ್ರಾಪಂ ಕಾರ್ಯವೈಖರಿಯ ಮಾಹಿತಿ

Mainashree
Updated On : 18 Mar 2014, 11:53 am

ಜಾವಗಲ್: ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವೇದಿಕೆ ವತಿಯಿಂದ ಅಂತಿಮ ಬಿ.ಎ. ವಿದ್ಯಾರ್ಥಿಗಳನ್ನು ಜಾವಗಲ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕವಿತಾ ಮಂಜುನಾಥ್ ಹಾಗೂ ಅಭಿವೃದ್ಧಿ ಅಧಿಕಾರಿ  ವಿರೂಪಾಕ್ಷಪ್ಪ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ವಿರೂಪಾಕ್ಷಪ್ಪ ಮಾತನಾಡಿ, ಗ್ರಾಮ ಪಂಚಾಯ್ತಿ ರಚನೆಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಲಾಗುವುದು. ವಾರ್ಡ್‌ಗಳ ರಚನೆ, ಸದಸ್ಯರ ಸಂಖ್ಯೆ, ಚುನಾವಣೆ, ಅಧ್ಯಕ್ಷ ಉಪಾಧ್ಯಕ್ಷರ ಅಯ್ಕೆ ಗ್ರಾಮ ಪಂಚಾಯಿತಿಯ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಗ್ರಾಮದ ಎಲ್ಲಾ  ಜನತೆಗೂ ಕುಡಿಯುವ ನೀರಿನ ಸೌಲಭ್ಯ, ಬೀದಿದೀಪದ ವ್ಯವಸ್ಥೆ, ಗ್ರಾಮದ ನೈರ್ಮಲ್ಯ ಕಾಪಾಡುವುದು ಗ್ರಾಮ ಪಂಚಾಯ್ತಿಯ ಆದ್ಯ ಕರ್ತವ್ಯ ಎಂದರು.
ತೆರಿಗೆ ವಸೂಲಾತಿ, ಖಾತೆ ಬದಲಾವಣೆ, ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಅವರು ವಿವರ ನೀಡಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎಮ್. ಸತೀಶ್, ಪುಟ್ಟಸ್ವಾಮಿಗೌಡ, ಎಸ್.ಎಂ. ಶಿವಶಂಕರ ಮೂರ್ತಿ, ಜೆ.ಎಸ್ ದಯಾನಂದ ಹಾಗೂ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement