ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯಾರ್ಥಿನಿಯರಿಂದ ಚುನಾವಣಾ ಅರಿವು

Mainashree
Updated On : 19 Mar 2014, 12:01 pm

ಹಾಸನ: ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಚುನಾವಣಾ ಸಮೀಕ್ಷ ಮತ್ತು ಅರಿವು ಕಾರ್ಯಕ್ರಮದಲ್ಲಿ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿನಿಯರು ಮಂಗಳವಾರ ಚುನಾವಣಾ ಸಮೀಕ್ಷೆ ಮತ್ತು ಅರಿವು ಕಾರ್ಯಕ್ರಮ ನಡೆಸಿದರು.
ನಗರದ ಕುವೆಂಪು ನಗರ ಬಡಾವಣೆಯಲ್ಲಿ ಸಮೀಕ್ಷಾ ಕಾರ್ಯ ನಡೆಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾನ ಮಾಡುವಂತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು. ಜಿಲ್ಲಾಡಳಿತದ ವತಿಯಿಂದ ನೀಡಿದ್ದ ಸಮೀಕ್ಷಾ ಪತ್ರದಲ್ಲಿನ ಎಲ್ಲಾ ವಿವರಗಳನ್ನು ಸಾರ್ವಜನಿಕರಿಂದ ಪಡೆದುಕೊಳ್ಳಲಾಯಿತು. ಕಾಲೇಜಿನ 40 ವಿದ್ಯಾರ್ಥಿಗಳು ಸುಮಾರು 250 ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಇದಕ್ಕೂ ಮುನ್ನ ಕಾಲೇಜಿನಲ್ಲಿ ಎನ್.ಎಸ್.ಎಸ್. ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್ ರಾಜಾ ನಂದನ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮತದಾನ ಮಾಡುವಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಎನ್.ಎಸ್.ಎಸ್. ಅಧಿಕಾರಿ ಎಂ.ಕೆ. ಮಹೇಶ್, ಅಧ್ಯಾಪಕ ಡಾ. ನಿರ್ವಾಣೀಗೌಡ, ಡಾ. ಶಶಿಕುಮಾರ್, ಸುಂದರೇಶ್, ಉಪನ್ಯಾಸಕ ದಿಲೀಪ್ ಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement