ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಗೌಡರಿಗೆ ದಲಿತರು, ಹಿಂದುಳಿದ ವರ್ಗದ ಬೆಂಬಲ: ಇಂದಿರಾ

Mainashree
Updated On : 21 Mar 2014, 11:41 am

ಹಾಸನ: ದಲಿತರು, ಹಿಂದುಳಿದವರನ್ನು ಗುರುತಿಸಿ ರಾಜಕೀಯ ಸ್ಥಾನಮಾನ ನೀಡಿದ್ದು, ಆದ್ದರಿಂದ ಆ ವರ್ಗದವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬೆಂಬಲಿಸುವುದಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜಿ.ಟಿ. ಇಂದಿರಾ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ, ಹಿಂದುಳಿದ ವರ್ಗಗಳಿಗೆ ರಾಜಕೀಯ ಶಕ್ತಿ ನೀಡಿದ್ದರೆ ಅದು ದೇವೇಗೌಡರು ಮಾತ್ರ. ಈ ಸಮುದಾಯಗಳಿಗೆ ಆರ್ಥಿಕವಾಗಿ, ರಾಜಕೀಯವಾಗಿ ಶಕ್ತಿಯನ್ನು ತುಂಬುವಂತಹ ಕೆಲಸವನ್ನು ಮಾಡಿದ್ದಾರೆ. ಇದನ್ನು ತಿಳಿಯದೇ, ದೇವೇಗೌಡರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುವುದು ಸರಿಯಲ್ಲ ಎಂದು ಹೇಳಿದರು.
ದಲಿತರಿಗೆ ಅಧಿಕಾರ: ದೇವೇಗೌಡರು ಜಿಲ್ಲಾ ಪಂಚಾಯ್ತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಲ್ಲಿ ದಲಿತ ಸಮುದಾಯದವರನ್ನು ಗೆಲ್ಲಿಸಿ ಜನಪ್ರತಿನಿಧಿಗಳನ್ನಾಗಿ ಮಾಡಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ಸ್ಥಾನಗಳು ಮೀಸಲಾದ ಸಂದರ್ಭದಲ್ಲೂ ದೇವೇಗೌಡ ಹಾಗೂ ರೇವಣ್ಣ, ದಲಿತರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
ಕಾಂಗ್ರೆಸ್ ಹಾಗೂ ಬಿಜೆಪಿಗಳಲ್ಲಿ ದಲಿತರಿಗೆ ಇಷ್ಟೊಂದು ಸ್ಥಾನಮಾನ ನೀಡಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಇರುವ ಹಿಂದುಳಿದ ಅನೇಕ ಸಂಘಟನೆಗಳು ಮತ್ತು ಜನ ಸಮುದಾಯ ಈ ಬಾರಿ ಗೌಡರನ್ನು ಬೆಂಬಲಿಸಲಿದ್ದಾರೆ ಎಂದರು. ಮುಖಂಡ ಬಾಲಕೃಷ್ಣಮೂರ್ತಿ ಮಾತನಾಡಿ, ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಾಬಲ್ಯದ ನಡುವೆಯೂ ಸಹ ದಲಿತರು, ಹಿಂದುಳಿದವರಿಗೆ ಸ್ಥಾನಮಾನ ನೀಡಿದ್ದಾರೆ. ದಲಿತರಿಗೆ ನ್ಯಾಯವನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶಂಕರಯ್ಯ, ಎ.ಸಿ. ಮಂಜುನಾಥ , ರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement