ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ದೇವೇಗೌಡರ ವಿರುದ್ಧ ಅಪಪ್ರಚಾರ ಸರಿಯಲ್ಲ

Vishwanath S
Updated On : 23 Mar 2014, 12:36 pm

ಹಾಸನ: ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುವ ಸರಿಯಲ್ಲ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾವಗಲ್ ರಾಜಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಮಾಡುತ್ತಿದ್ದು, ಅದನ್ನು ತೊಡೆದು ಹಾಕಲು ತಾನು ಸ್ಫರ್ಧಿಸುತ್ತಿರುವುದಾಗಿ ಬಿಜೆಪಿ ಅಭ್ಯರ್ಥಿ ಸಿ.ಎಚ್. ವಿಜಯ್ ಶಂಕರ್ ತಿಳಿಸಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣ ಮಾತ್ರ ವಿಜಯ ಶಂಕರ್ ಕಣ್ಣಿಗೆ ಕಾಣಿಸುತ್ತಿಲ್ಲ. ಚುನಾವಣೆಯ ಭಯದಿಂದ ಗೌಡರ ಬಗ್ಗೆ ಕುಟುಂಬ ರಾಜಕಾರಣ ಮಾಡುವ ಆರೋಪ ಮಾಡಿದ್ದಾರೆ ಎಂದರು.
ಕಾರ್ಯಕರ್ತರ ಸಭೆ: ಮುಖಂಡ ಲಿಂಗೇಶ್ ಮಾತನಾಡಿ, ಮಾ. 24ರಂದು ಬೆಳಗ್ಗೆ 11ಕ್ಕೆ ಹಾಸನ ನಗರದ ಶ್ರೀಬಸವೇಶ್ವರ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜದವರು ಹಾಗೂ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿ ಸಭೆಯನ್ನು ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ರಾಜಣ್ಣ, ಪ್ರಸಾದ್, ಸಂಗಂ ಹಾಗೂ ಇತರರು ಇದ್ದರು.
'ಗೌಡರು ಸಂಸತ್ತಿನಲ್ಲಿ ಒಂದೂ ಪ್ರಶ್ನೆ ಕೇಳಿಲ್ಲ'
ಅರಕಲಗೂಡು: ಜಿಲ್ಲೆಯ ಹಾಲಿ ಸಂಸದರಾದ ದೇವೇಗೌಡರು ಕಳೆದ ಐದು ವರ್ಷಗಳಲ್ಲಿ ಸಂಸತ್‌ನಲ್ಲಿ ಜಿಲ್ಲೆಯ ಸಮಸ್ಯೆಗಳ ಕುರಿತಾಗಿ ಒಂದೂ ಪ್ರಶ್ನೆ ಎತ್ತಿಲ್ಲ. ಈ ಹಿನ್ನೆಲೆಯಲ್ಲಿ, ಬದಲಾವಣೆ ತರಲು ಬಿಜೆಪಿಯನ್ನು ಬೆಂಬಲಿಸುವಂತೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಗುರುದೇವ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶನಿವಾರ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿ ದೇವೇಗೌಡರು ಕಳೆದ ಮೂರು ವಾರಗಳಿಂದ ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ. ಈವರೆಗೆ ಗೌಡರು ಜಿಲ್ಲೆಯ ಸಂಸದರಾಗಿ ಎಲ್ಲಿದ್ದರು ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಬಿಜೆಪಿ ಮುಖಂಡರಾದ ನವಿಲೆ ಅಣ್ಣಪ್ಪ,ಬಿಜೆಪಿ ಅಭ್ಯರ್ಥಿ ವಿಜಯಶಂಕರ್, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ. ಕಶವೇಗೌಡ. ರಾಜ್ಯ ಬಿಜೆಪಿ ಮುಖಂಡ ಅಶ್ವತ್ಥನಾರಾಯಣ, ಮರಡಿ ಸೋಮಶೇಖರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್, ಸ್ಥಳೀಯ ಮುಖಂಡರುಗಳಾದ ಎನ್. ರವಿಕುಮಾರ್, ಕೊಣನೂರು ರಾಮಣ್ಣ,ರಾಜೇಗೌಡ,ತಾಲೂಕು ಬಿಜೆಪಿ ಕಾರ್ಯದರ್ಶಿ ವಿಶ್ವನಾಥ್, ಸಂಜಯ್ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement