ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲಾಡಳಿತ ನಿರ್ಲಕ್ಷ್ಯ: ನೀರಿನ ಸಮಸ್ಯೆ ಉಲ್ಬಣ

Rashmi Kasaragodu
Updated On : 23 Mar 2014, 11:58 am

ಕ.ಪ್ರ. ವಾರ್ತೆ ಟಿ ಅರಸೀಕೆರೆ ಟಿ ಮಾ. 23: ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ 5 ತಿಂಗಳುಗಳೇ ಕಳೆದರೂ ಜಿಲ್ಲಾಡಳಿತ ಈವರೆಗೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರದ ಪರಿಸ್ಥಿತಿ ಎದುರಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದ್ದಾರೆ.
ಪಟ್ಟಣದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದಕಾರಣ ಚುನಾಯಿತ ಜನಪ್ರತಿನಿಧಿಗಳಿಗೆ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗದ ಕಾರಣ ಜಿಲ್ಲಾಡಳಿತ ತಕ್ಷಣ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಹೊಸ ಕೊಳವೆ ಭಾವಿಗಳನ್ನು ತೆಗೆಸಲು ಕ್ರಮಕೈಗೊಳ್ಳುವುದು ಸೂಕ್ತ ಎಂದರು. ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಅರಸೀಕೆರೆ ತಾಲೂಕು ಇದೆ ಎಂದು ಅವರು ತಿಳಿಸಿದರು.
ಅಸಮಾಧಾನ: ಪ್ರತಿನಿತ್ಯ ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ದೂರಕ್ಕೆ ಹೋಗುತ್ತಿರುವ ಗ್ರಾಮೀಣ ಭಾಗದ ಜನರ ಸಮಸ್ಯೆ ಕುರಿತು ಜಿಲ್ಲಾ ಪಂಚಾಯಿತಿ ಚುನಾಯಿತ ಸದಸ್ಯರು ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಹೊಸದಾಗಿ ಕೊಳವೆ ಬಾವಿಗಳನ್ನು ತೆಗೆಸುವ ಮತ್ತು ಅನಿವಾರ್ಯ ಡೆಗಳಿಗೆ ಟ್ಯಾಂಕರ್ ಮೂಕ ಕುಡಿಯುವ ನೀರನ್ನು ಸರಬರಾಜು ಮಾಡುವ ಪರಿಹಾರ ಕಾರ್ಯಗಳಿಗೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಬೇಕಾಗಿದೆ. ಆದರೆ, ಅಂತಹ ಯಾವುದೇ ಪರಿಹಾರ ಕಾರ್ಯಗಳನ್ನು ಜಿಲ್ಲಾಡಳಿತ ಈವರೆಗೂ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಜನರು  ಪ್ರತಿಭಟಿಸುವ ಮುನ್ನವೇ ಸೂಕ್ತ ಪರ್ಯಾಯ ವ್ಯವಸ್ಥೆಯನ್ನು ಜಿಲ್ಲೆಯ ಅಧಿಕಾರಿಗಳ ವರ್ಗ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಎನ್.ಎಸ್. ಸಿದ್ದರಾಮಶೆಟ್ಟಿ, ಮುಖಂಡರಾದ ಶಂಕರಲಿಂಗಪ್ಪ, ಶಿವಲಿಂಗಪ್ಪ, ಹನುಮಪ್ಪ, ಸಂಕೊಂಡನಹಳ್ಳಿ ಸ್ವಾಮಿ ಇದ್ದರು.



ವಿದ್ಯುತ್ ಕಣ್ಣಾಮುಚ್ಚಾಲೆ
ತಾಲೂಕಿನಲ್ಲಿ ಪ್ರತಿನಿತ್ಯ ಅನಿರ್ದಿಷ್ಟ ಕಾಲ ವಿದ್ಯುತ್ ನಿಲುಗಡೆ ಉಂಟಾಗುತ್ತಿರುವ ತೊಂದರೆ ನಿವಾರಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಶಿವಲಿಂಗೇಗೌಡ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement