ಮತದಾನ ಕುರಿತು ಅರಿವು
ಹಾಸನ: ಏ. 17ರಂದು ಮತದಾನ ನಡೆಯಲಿದ್ದು, ಮತದಾನ ನಿಮ್ಮ ಹಕ್ಕು ಮತ್ತು ಕರ್ತವ್ಯ ತಪ್ಪದೇ ಮತದಾನ ನೀಡಿ ಪ್ರಜಾಪ್ರಭುತ್ವ ಬಲಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಡಿಮೆ ಮತದಾನ ಆಗಿರುವ ಮತದಾನ ಪ್ರದೇಶಗಳಲ್ಲಿ ತಮ್ಮ ಕುಟುಂಬ ಹಾಗೂ ಅಕ್ಕಪಕ್ಕದ ಕುಟುಂಬಗಳಲ್ಲಿ ಮತದಾನ ಮಾಡುವ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಇದ್ದರು.