ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಸುಭದ್ರ ಸರ್ಕಾರಕ್ಕಾಗಿ ಎಲ್ಲರೂ ಮತ ಹಾಕಿ'

Rashmi Kasaragodu
Updated On : 23 Mar 2014, 11:46 am

ಅರಸೀಕೆರೆ: ಮತದಾನ ನಿಮ್ಮ ಹಕ್ಕು ಅದನ್ನು ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಪ್ರತಿಯೊಬ್ಬರೂ ಮತದಾನ ಮಾಡಬೇಕೆಂದು ತಾಲೂಕು ಪಂಚಾಯ್ತಿ  ಕಾಯ ನಿರ್ವಹಣಾಧಿಕಾರಿ ಮೂರ್ತಿ ತಿಳಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ಪ್ರಥಮ ದರ್ಜೆ ಕಾಲೇಜಿನ  ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನಿಮ್ಮ ನಡೆ, ಮತದಾನದ ಕಡೆ' ಎಂಬ ಧ್ಯೇಯವಾಕ್ಯದೊಂದಿಗೆ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಮನವಿ ಮಾಡಿದರು.
ಆಯ್ಕೆಯಾಗಲು ಸಾಧ್ಯ: ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಲು ಸುಭದ್ರ ಸರ್ಕಾರ ರಚನೆಗೆ 18 ವರ್ಷ ತುಂಬಿದ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಶೇಕಡಾವಾರು ಮತದಾನ ಹೆಚ್ಚಾದರೆ ಉತ್ತಮ ಅಭ್ಯರ್ಥಿ ಆಯ್ಕೆಯಾಗಲು ಸಾಧ್ಯ ಎಂದರು.
ನೋಡಲ್ ಅಧಿಕಾರಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಯವರು ಅಕ್ಕಪಕ್ಕದವರು ಹಾಗೂ ಜನರಲ್ಲಿ ಮತದಾನದ ಪಾವಿತ್ರ್ಯತೆಯ ಬಗ್ಗೆ ಅರಿವು ಮೂಡಿಸಿ ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಜಾಗೃತಿ ಉಂಟುಮಾಡಬೇಕೆಂದು ಮನವಿ ಮಾಡಿದರು. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸೈಯದ್ ಬಾಷ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಎನ್.ಎಸ್.ಎಸ್. ಅಧಿಕಾರಿ ಕೆ.ಎಸ್. ವಿಶ್ವನಾಥ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement