ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನ ಬಟವಾಡೆ
ಹಾಸನ; 2013-14 ನೇ ಸಾಲಿನಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಶೈಕ್ಷಣಿಕ ಸಂಸ್ಥೆಗಳಲ್ಲಿ ಓದುತ್ತಿರುವ ಪಿಂಚಿಣಿದಾರ ಮಾಜಿ ಸೈನಿಕರ ಮಕ್ಕಳ ಶಿಷವೇತನದ ಮೊತ್ತವನ್ನು ಮಾಜಿ ಸೈನಿಕರ ಪಿಂಚಣಿ ಖಾತೆಗೆ ಈಗಾಗಲೇ ಕಳುಹಿಸಲಾಗಿದೆ. ಸಂಬಂಧಿಸಿದ ಮಾಜಿ ಸೈನಿಕರು ತಮ್ಮ ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಶಿಷ್ಯವೇತನದ ಮೊತ್ತ ತಲುಪಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಮಾಹಿತಿಗಾಗಿ ಹಾಸನದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.