ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ನಾಮಪತ್ರ ಇಂದು
ಹಾಸನ: ಕಾಂಗ್ರೆಸ್ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ. ಮಂಜು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎಚ್.ಕೆ. ಮಹೇಶ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮುನ್ನ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಮೂಲಕ ಆಗಮಿಸಲಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವರು ಎಂದು ಹೇಳಿದರು.
ಮಾ. 29ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮುನಿಸ್ವಾಮಿ, ಖಡಾಕಡಿ ಪೀರ್ ಸಾಹೇಬ್, ವಕೀಲರಾದ ಪ್ರಸನ್ನ ಹಾಗೂ ಪಕ್ಷದ ಏಜೆಂಟ್ ರಾಜು ಇದ್ದರು.