ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕುಡಿವ ನೀರು ಸಮಸ್ಯೆ ಪರಿಹಾರಕ್ಕೆ ಒತ್ತಾಯ

Rashmi Kasaragodu
Updated On : 26 Mar 2014, 12:54 pm

ಅರಸೀಕೆರೆ: ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ಪಟೇಲ್ ಶಿವಪ್ಪ ಮನವಿ ಮಾಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಸತತ ಬರಗಾಲದ ಹಿನ್ನೆಲೆಯಲ್ಲಿ ಅಂತರ್ಜಲ ಕುಸಿತದ ಪರಿಣಾಮ ಶೇ. 70ರಷ್ಟು ಕೊಳವೆ ಬಾವಿಗಳಲ್ಲಿ ನೀರಿಲ್ಲ.  ಎಲ್ಲೆಡೆಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಇತ್ತೀಚೆಗೆ ರಾಜ್ಯ ಸರ್ಕಾರ  ನೀರಿನ ಪರ್ಯಾಯ ವ್ಯವಸ್ಥೆಗಾಗಿ ಜಿಲ್ಲಾಡಳಿತಕ್ಕೆ ಖರ್ಚು ಮಾಡಲು ರು. 50 ಲಕ್ಷ ಬಿಡುಗಡೆ ಮಾಡಿದೆ. ಈ ಹಣದಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೆಗೆಸುವ ಮತ್ತು ಟ್ಯಾಂಕರ್ ನೀರು ಸರಬರಾಜು ಮಾಡುವ ವ್ಯವಸ್ಥೆ ಕೈಗೊಂಡು ಸಾರ್ವಜನಿಕರಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದರು.
ಪ್ರಚಾರ: ಅಲ್ಲದೆ ಮಾ. 29ರಂದು ಹಾಸನ ನಗರದ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ ಹಾಗೂ ಸಚಿವ ಸಂಪುಟದ ಇನ್ನಿತರ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್, ನಗರಾಧ್ಯಕ್ಷ ಉಮಾಶಂಕರ್, ವಿಜಯಕುಮಾರ್, ಅಬ್ದುಲ್ ಜಮೀಲ್, ರಘು, ಅಜೇಯ ಇನ್ನಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement