ಚಿನ್ನದ ಪದಕ ವಿಜೇತರಿಗೆ ಸನ್ಮಾನ
ಅರಸೀಕೆರೆ: ಪಟ್ಟಣದ ಅನಂತ ಸದ್ವಿದ್ಯಾ ಶಿಕ್ಷಣಾ ಮಹಾವಿದ್ಯಾಲಯದಲ್ಲಿ ಶಿಕ್ಷಣ ಮುಗಿಸಿ ಮೈಸೂರು ವಿಶ್ವವಿದ್ಯಾನಿಲಯದ 2 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ಪಡೆದ ವಿದ್ಯಾರ್ಥಿನಿ ಫೌಜಿಯಾ ಬಾನು ಅವರನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್ ಅನಂತಕುಮಾರ್ ಮಾತನಾಡಿ, ವಿದ್ಯೆ ಸಾಧಕನ ಸೊತ್ತು. ಸೋಮಾರಿಯ ಸೊತ್ತಲ್ಲ. ಕಠಿಣ ಪರಿಶ್ರಮದಿಂದ ಸಾಧನೆ ಮಾಡಬಹುದು ಎಂಬುದಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಎಲ್ಲರಿಗೂ ಮಾದರಿಯಾಗಿದ್ದಾಳೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡಿ ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿರುವುದು ಸಂತಸದ ಸಂಗತಿ ಎಂದ ಫೌಜಿಯಾ, ಇಂತಹ ಸಾಧನೆ ಎಲ್ಲರಿಂದಲೂ ಮೂಡಿಬರಬೇಕು ಎನ್ನುವುದು ನನ್ನ ಹೆಬ್ಬಯಕೆ ಎಂದು ಆಶಿಸಿದರು.