ಸಿದ್ದರಾಮಯ್ಯ ಅಭಿಮಾನಿಗಳ ಸಭೆ
ಹಾಸನ: ಸಿದ್ದರಾಮಯ್ಯ ಅಭಿಮಾನಿ ಬಳಗದ ಸಭೆಯು ಸಂಘದ ಗೌರವಾಧ್ಯಕ್ಷ ಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಾದಿಹಳ್ಳಿ ವಿಶ್ವನಾಥ್ ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕುಗಳ ಎಲ್ಲಾ ಸಮಾಜದ ಮುಖಂಡರನ್ನು ಪರಿಗಣನೆಗೆ ತೆಗೆದು ಕೊಂಡು ಸಂಘಕ್ಕೆ ಹೆಚ್ಚು ಸದಸ್ಯರನ್ನು ನೋಂದಾಯಿಸಿಕೊಳ್ಳಲಾಗುವುದು ಎಂದು ಹೇಳಿದರು. ಸಂಘದ ಖಜಾಂಚಿ ಮರಿಮಲ್ಲೇ ಗೌಡ ಅವರು ಸಂಘದ ವತಿಯಿಂದ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಣ ಕಾಸಿನ ಅಗತ್ಯತೆ ಇರುವುದರಿಂದ ಈ ಬಗ್ಗೆ ಸಂಘದ ಪದಾಧಿಕಾರಿಗಳು ಗಮನ ಹರಿಸಬೇಕು ಎಂದು ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ಮಹೇಶ್ವರ ಮಾತನಾಡಿದರು. ಸಂಘದ ನಿರ್ದೇಶಕ ಕುಮಾರ್ ವಂದಿಸಿದರು.