ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಗುರುದೇವ್ ಮೇಲೆ ಗುರುತರ ಆರೋಪ

Rashmi Kasaragodu
Updated On : 27 Mar 2014, 12:01 pm

ಸಕಲೇಶಪುರ: ಜಿಲ್ಲಾ ಮುಖಂಡರೆಂದು ಕರೆಸಿಕೊಳ್ಳುತ್ತಿರುವ ಬಿ.ಆರ್. ಗುರುದೇವ್ ಜಿಲ್ಲಾ ರಾಜಕಾರಣದಲ್ಲಿ ಗುಂಪುಗಾರಿಕೆ ನಡೆಸುತ್ತಿದ್ದಾರೆ ಎಂದು  ಬಿಜೆಪಿ ಮುಖಂಡರಾದ ಬಾಳ್ಳುಗೋಪಾಲ್ ಮತ್ತು ರಾಮಚಂದ್ರಗೌಡ ಟೀಕಿಸಿದ್ದಾರೆ.
ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಟೇಶ್ ಅವರು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅವನತಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷಕ್ಕೆ ಹಿನ್ನಡೆ: ತಮ್ಮ ಮಾತಿಗೆ ಎದುರಾಡುವವರನ್ನು ಪಕ್ಷದಲ್ಲಿ ಯಾವುದೇ ಸ್ಥಾನಮಾನ ಸಿಗದಂತೆ ನೋಡಿಕೊಳ್ಳುವ ನಟೇಶ್, ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ನಡೆಸುತ್ತಿದ್ದು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಇವರು ಸಂಘಟನಾ ಕಾರ್ಯದರ್ಶಿ ಆಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಯಾವುದೇ ಉಪಯೋಗವಾಗಿಲ್ಲ. ಎಲ್ಲೆಡೆ, ಬಿಜೆಪಿ ಅಭ್ಯರ್ಥಿಗಳು ಕಡಿಮೆ ಮತಗಳನ್ನು ಗಳಿಸಿದ್ದಾರೆ ಎಂದು ನಟೇಶ್ ದೂರಿದರು.  
ಆರೋಪ: ಎಲ್ಲಾ ಪಕ್ಷಗಳನ್ನು ಎಡತಾಕಿ ಬಂದಿರುವ ಗುರುದೇವ್ ಅವರಿಗೆ ಬಿಜೆಪಿಯಲ್ಲಿ ಸಿಗುತ್ತಿರುವ ಮಾನ್ಯತೆ ಪಕ್ಷದಲ್ಲಿರುವ ಇತರ ನಿಷ್ಠಾವಂತ ಕಾರ್ಯಕರ್ತರಿಗೆ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಬಿಜೆಪಿ ಪದಾಧಿಕಾರಿಗಳೇ ಇಲ್ಲ ಚುನಾವಣೆ ಸಂದರ್ಭದಲ್ಲಿ ಹಣ ಮಾಡುವ ಉದ್ದೇಶದಿಂದ ಚುನಾವಣೆ ಸಮಿತಿ ಸೃಷ್ಟಿಸಿಕೊಂಡು ಚುನಾವಣೆಯ ನಂತರ ಸಂಘಟನೆಯನ್ನು ಕೈಬಿಡಲಾಗುತ್ತಿದೆ ಎಂದು ಆರೋಪಿಸಿದರು.
ಮನವಿ: ಗುರುದೇವ್ ಅವರಿಂದ ಪಕ್ಷಕ್ಕೆ ತೊಂದರೆಯಾಗುತ್ತಿರುವುದನ್ನು ಪರಿಗಣಿಸಿ, ಈ ಬಾರಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿರುವ ವಿಜಯಶಂಕರ್ ಹಿರಿಯ ಕಾರ್ಯಕರ್ತರನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸದಾಶಿವ ಮತ್ತು ಎಂ.ಎಂ ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement