ಗ್ರಂಥಾಲಯ ವೇದಿಕೆಯಿಂದ ಉಪನ್ಯಾಸ
ಅರಸೀಕೆರೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ವೇದಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು.
ತುಮಕೂರು ವಿಶ್ವವಿದ್ಯಾನಿಲಯದ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಎಚ್. ರಾಜೇಂದ್ರಬಾಬು ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಬ್ಯಾಂಕಿಂಗ್, ರೀಟೈಲ್, ಮಾರ್ಕೆಟಿಂಗ್, ಟೆಕ್ಸ್ಟೈಲ್ಸ್, ಫೈನ್ ಆರ್ಟ್ಸ್, ಕೈಗಾರಿಕೆಗಳಲ್ಲಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಹಾಗೂ ಗ್ರಂಥಾಲಯ ವಿಜ್ಞಾನಗಳಲ್ಲಿ ಬಹಳಷ್ಟು ಉದ್ಯೋಗಾವಕಾಶಗಳು ಲಭ್ಯವಿವೆ. ವಿದ್ಯಾರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆ, ಕಠಿಣಶ್ರಮ ಹಾಗೂ ಏಕಾಗ್ರತೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯವಿದೆ ಎಂದರು.
ಪ್ರಾಂಶುಪಾಲ ಪ್ರೊ. ಸೈಯದ್ ಭಾಷ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಪಾಲಕ ಮಂಜುನಾಥ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರೊ. ಕೆ.ಎಂ. ಈಶ್ವರಪ್ಪ, ಪ್ರೊ. ಸುಬ್ರಮಣಿ ಎಸ್.ವಿ. ಪ್ರೊ. ವಿಶ್ವನಾಥ್ ಕೆ.ಎಸ್. ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಅತಿಥಿ ಉಪನ್ಯಾಸಕರು ಇದ್ದರು.