ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಗರಕ್ಕೆ ಇಂದು ಸಿಎಂ ಆಗಮನ

Rashmi Kasaragodu
Updated On : 29 Mar 2014, 1:36 am

ಹಾಸನ: ಲೋಕಸಭಾ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸಿರುವ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮಾ. 29ರಂದು ನಗರಕ್ಕೆ ಆಗಮಿಸುವರು.
ನಗರದ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಸಿದ್ಧಪಡಿಸಲಾಗಿದ್ದು, ಅಂದು ಬೆಳಗ್ಗೆ 11ಕ್ಕೆ ಸಮಾವೇಶ ಆರಂಭವಾಗಲಿದೆ. ಹೆಲಿಕ್ಯಾಪ್ಟರ್ ಮೂಲಕ ನಗರಕ್ಕೆ ಬರುವ ಮುಖ್ಯಮಂತ್ರಿಗಳು ನೇರವಾಗಿ ಸಭೆಗೆ ಹೋಗುವರು. ಮಧ್ಯಾಹ್ನ 1ಕ್ಕೆ ತರೀಕೆರೆ ಮತ್ತು ಕಡೂರು ತಾಲೂಕಿಗೆ ತೆರಳುವರು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ಸಕಲ ಸಿದ್ಧತೆ ಹಾಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement