ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಕಾನೂನು ಪಾಲಿಸುವುದರಿಂದ ಉತ್ತಮ ಸಮಾಜ ನಿರ್ಮಾಣ'

Rashmi Kasaragodu
Updated On : 30 Mar 2014, 1:57 am

ಹಾಸನ: ಕಾನೂನು ಮತ್ತು ನೈತಿಕತೆ ಎರಡನ್ನೂ ಸಮಾಜದ ಎಲ್ಲರೂ ಅನುಸರಿಸಿ ಸಮಾಜದಲ್ಲಿ ಬದುಕಿದಾಗ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಐ.ಎಂ. ಮೋಹನ್ ಅಭಿಪ್ರಾಯಪಟ್ಟರು.
ನಗರದ ಎಂ.ಕೃಷ್ಣ ಕಾನೂನು ಕಾಲೇಜಿನ ಎನ್ಎಸ್ಎಸ್ ಐಟಕ ಮತ್ತು  ಸರ್ಕಾರಿ ಗೃಹ ವಿಜ್ಞಾನ ಕಾಲೇಜು ಜಂಟಿಯಾಗಿ ಇತ್ತೀಚೆಗೆ ಆಯೋಜಿಸಿದ್ದ  ಮಹಿಳೆ ಮತ್ತು ಕಾನೂನು ಎಂಬ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಎಸ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಉಷಾ ಅವರು ಕೌಟುಂಬಿಕ ದೌರ್ಜನ್ಯ ಕಾಯ್ದೆ ಕುರಿತು ಮತ್ತು  ಹೇಮಾ ಅವರು ಮಹಿಳೆ ಮತ್ತು ಆಸ್ತಿ ಹಕ್ಕು ಕುರಿತು ಉಪನ್ಯಾಸ ನೀಡಿದರು. ವೆಂಕಟೇಶ್ ಸ್ವಾಗತಿಸಿದರು.  ನವೀನ್ಕುಮಾರ್ ವಂದಿಸಿದರು. ರಮೇಶ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement