ನಾನೇ 5 ವರ್ಷ ಸಿಎಂ ಆಗಿರ್ತೀನಿ: ಸಿದ್ದರಾಮಯ್ಯ
ನಾನೇ ಇನ್ನೂ 5 ವರ್ಷ ಸಿಎಂ. ಈ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಲೋಕಸಭೆ ಚುನಾವಣೆ ನಂತರ ಈ ಸಿದ್ದರಾಮಯ್ಯ ಗೆ ಸಿಎಂ ಸ್ಥಾನ ಹೋಗುತ್ತದೆ ಎಂದು ಜೆಡಿಎಸ್ ಮುಖಂಡರು ಸೇರಿದಂತೆ ಆನೇಕ ಮಂದಿ ಕನಸು ಕಾಣುತ್ತಿದ್ದಾರೆ. ಈ ಕನಸು ನನಸಾಗುವುದಿಲ್ಲ. ಯಾರೇ ಏನೇ ಕುತಂತ್ರ ಮಾಡಿದರೂ ನಡೆಯೋಲ್ಲ. ಜನರ ಆಶೀರ್ವಾದ ಇರುವವರೆಗೂ ಯಾರೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವೇದಿಕೆಯಲ್ಲಿ ಆಸೀನರಾಗಿದ್ದರು.